ಬೆಂಗಳೂರು: ‘ಸಿದ್ದರಾಮಯ್ಯ ಮತ್ತು ನನ್ನ ನಡುವಿನ ಆತ್ಮೀಯ ಸಂಬಂಧವನ್ನು ಹಾಳು ಮಾಡಲು ಕೆಲವರು ಉದ್ದೇಶಪೂರ್ವಕವಾಗಿ ಪ್ರಯತ್ನಿಸುತ್ತಿದ್ದಾರೆ’ ಎಂದು ಆಳಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ ಹೇಳಿದ್ದಾರೆ.

ತಮ್ಮ ಫೇಸ್ಬುಕ್ ಖಾತೆಯಲ್ಲಿ ವಿಡಿಯೊ ಹಂಚಿಕೊಂಡಿರುವ ಅವರು, ‘ನನ್ನ ಹೇಳಿಕೆಯನ್ನು ತಿರುಚಿ, ತೇಜೋವಧೆ ಮಾಡುತ್ತಿರುವುದು ಸರಿಯಲ್ಲ’ ಎಂದಿದ್ದಾರೆ.

‘ಕೆ.ಆರ್. ಪೇಟೆಯಲ್ಲಿ ಆತ್ಮೀಯರ ಜೊತೆ ಮಾತನಾಡುವಾಗ ಸಿದ್ದರಾಮಯ್ಯ ಅವರ ವಿಷಯ ಪ್ರಸ್ತಾಪ ಆದಾಗ, ನಾನು ಅವರ ಬಗ್ಗೆ ಮಾತನಾಡಿದ್ದೇನೆ. ಅವರು ಲಕ್ಕಿ. ಲಾಟರಿ ಹೊಡೆದು ಮುಖ್ಯಮಂತ್ರಿಯಾದರು ಎಂದಿದ್ದೆ. ನಾನೇ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿಸಿದ್ದು ಅನ್ನೋದು ಸಂಪೂರ್ಣ ತಪ್ಪು. ಸಿದ್ದರಾಮಯ್ಯ ಅವರು ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡುವಾಗ ನಾನೂ ಹೋಗಿದ್ದೆ. ಸಿದ್ದರಾಮಯ್ಯ ಅವರು ಈ ಸಲ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡುವುದು ಬೇಡ ಅಂದಿದ್ದರು. ಆದರೆ, ನಾನೇ ಭೇಟಿ ಮಾಡುವಂತೆ ಒತ್ತಾಯ ಮಾಡಿದಾಗ ಹೋಗಿದ್ದಾರೆ’ ಎಂದು ಸ್ಪಷ್ಟನೆ ನೀಡಿದ್ದಾರೆ.

‘ಸಿದ್ದರಾಮಯ್ಯ ಒಬ್ಬ ಜನನಾಯಕ. ನಾವು ಒಂಬತ್ತು ಮಂದಿ ಶಾಸಕರು ಜೆಡಿಎಸ್ ಬಿಟ್ಟು ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿದ್ದೇವೆ. ಕಾಂಗ್ರೆಸ್ ಕೂಡ ಅವರಿಗಿರುವ ಜನ ಬೆಂಬಲ ನೋಡಿ ಮುಖ್ಯಮಂತ್ರಿಯಾಗಿ ಮಾಡಿದೆಯೇ ಹೊರತು, ನಾವು ಹೇಳಿದ್ದರಿಂದ ಮಾಡಿಲ್ಲ. ನನಗಂತೂ ಅವರನ್ನು ಮುಖ್ಯಮಂತ್ರಿ ಮಾಡಲು ಸಾಧ್ಯವಿಲ್ಲ. ಈ ಮಧ್ಯೆ, ನಮ್ಮ ನಡುವಿನ ಆತ್ಮೀಯ ಸಂಬಂಧವನ್ನು ಹಾಳು ಮಾಡಲು ಕೆಲವರು ಪ್ರಯತ್ನ ಮಾಡುತ್ತಿದ್ದಾರೆ. ಇದು ಸರಿಯಲ್ಲ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.