ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಂಚದ ಆರೋಪಕ್ಕೆ ಪುರಾವೆ ಅವಶ್ಯ: ಹೈಕೋರ್ಟ್‌

Published 1 ಜನವರಿ 2024, 16:31 IST
Last Updated 1 ಜನವರಿ 2024, 16:31 IST
ಅಕ್ಷರ ಗಾತ್ರ

ಬೆಂಗಳೂರು: ‘ಲಂಚಕ್ಕೆ ಬೇಡಿಕೆ ಇರಿಸಿದ ಆರೋಪಗಳಿಗೆ ಸಂಬಂಧಿಸಿದಂತೆ ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆಸುವ ವೇಳೆ ಹಣಕ್ಕಾಗಿ ಬೇಡಿಕೆ ಇಟ್ಟಿರುವ ಮತ್ತು ಲಂಚ ಪಡೆದಿರುವ ಕುರಿತಂತೆ ಸೂಕ್ತ ಪುರಾವೆಗಳನ್ನು ಹೊಂದಿರಬೇಕಾದ್ದು ಅತ್ಯಗತ್ಯ‘ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

‘ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ದಾಖಲಿಸಲಾಗಿರುವ ನನ್ನ ವಿರುದ್ಧದ ಪ್ರಕರಣ ರದ್ದುಪಡಿಸಬೇಕು‘ ಎಂದು ಕೋರಿ ಗದಗ ನಿವೃತ್ತ ಸಬ್ ರಿಜಿಸ್ಟ್ರಾರ್ ಶ್ರೀಕಾಂತ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

‘ಸೂಕ್ತ ದಾಖಲೆಗಳೇ ಇಲ್ಲದ ಈ ಪ್ರಕರಣದ ವಿಚಾರಣೆ ಮುಂದುವರೆಸಿದಲ್ಲಿ ಕಾನೂನಿನ ದುರ್ಬಳಕೆಯಾಗಲಿದೆ‘ ಎಂಬ ಅಭಿಪ್ರಾಯ ವ್ಯಕ್ತಪಡಿಸಿ, ಅರ್ಜಿದಾರರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸಿದೆ.

ಪ್ರಕರಣವೇನು?: ‘ಗದಗ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ‘ ಎಂದು ಆರೋಪಿಸಿ 2019 ರಲ್ಲಿ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ಅನಾಮಧೇಯ ದೂರೊಂದು ಸಲ್ಲಿಕೆಯಾಗಿತ್ತು. ದೂರು ದಾಖಲಿಸಿಕೊಂಡಿದ್ದ ಎಸಿಬಿ ದಾಳಿ ನಡೆಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯವು 2021ರಲ್ಲಿ ಸಂಜ್ಞೇಯ ಅಪರಾಧ ಎಂದು ಪರಿಗಣಿಸಿದ್ದನ್ನು ಪ್ರಶ್ನಿಸಿ ಶ್ರೀಕಾಂತ್ ಹೈಕೋರ್ಟ್‌ ಮೆಟ್ಟಿಲೇರಿದ್ದರು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ‘ಆರೋಪಿಯಿಂದ ವಶಪಡಿಸಿಕೊಳ್ಳಲಾದ ಹಣ ಲಂಚದ್ದೇ ಎಂಬುದಕ್ಕೆ ಸೂಕ್ತ ಪುರಾವೆಗಳಿಲ್ಲ‘ ಎಂದು ಪ್ರತಿಪಾದಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT