ಪ್ರಜಾವಾಣಿ ವಾರ್ತೆ

ಬೆಂಗಳೂರು: ರಾಷ್ಟ್ರೀಯ ವೈದ್ಯಕೀಯ ಆಯೋಗದ (ಎನ್ಎಂಸಿ) ಪರಿವೀಕ್ಷಕರ ತಂಡದಲ್ಲಿ ನಿಯೋಜಿತರಾಗಿ, ವೈದ್ಯಕೀಯ ಸಂಸ್ಥೆಗಳಿಗೆ ಅನುಕೂಲಕರ ತಪಾಸಣಾ ವರದಿ ನೀಡಲು ಲಂಚ ಪಡೆದ ಆರೋಪ ಎದುರಿಸುತ್ತಿರುವ ಮೂವರು ವೈದ್ಯರನ್ನು ವೈದ್ಯಕೀಯ ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ.

ಬೆಂಗಳೂರು ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶರೀರ ವಿಜ್ಞಾನ ವಿಭಾಗದ ಸಹ ಪ್ರಾಧ್ಯಾಪಕಿ ಡಾ. ಎಂ.ಎಸ್. ಚೈತ್ರಾ, ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮೂಳೆ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಸಿ.ಎನ್. ಮಂಜಪ್ಪ ಮತ್ತು ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆ ಸಮುದಾಯ ವೈದ್ಯಕೀಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಅಶೋಕ್ ಶೆಲ್ಕೆ ಅಮಾನತುಗೊಂಡವರು.

ಲಂಚ ಪಡೆದ ಆರೋಪದ ಕುರಿತು ತನಿಖೆ ನಡೆಸಿದ್ದ ಸಿಬಿಐ, ಈ ಮೂವರ ವಿರುದ್ಧ ಈಗಾಗಲೇ ಎಫ್ಐಆರ್ ದಾಖಲಿಸಿದೆ. ಈ ಕುರಿತು ಇಲಾಖೆಗೆ ಸಿಬಿಐ ಇ-ಮೇಲ್ ಮೂಲಕ ಮಾಹಿತಿ ನೀಡಿದೆ. ಹೀಗಾಗಿ ಮೂವರನ್ನೂ ಕರ್ತವ್ಯದಿಂದ ಅಮಾನತುಗೊಳಿಸಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮದ್ ಮೊಹಸಿನ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಛತ್ತೀಸ್ಗಡದ ರಾಯಪುರದಲ್ಲಿರುವ ರವತ್ಪುರ ಸರ್ಕಾರ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆ್ಯಂಡ್ ರಿಸರ್ಚ್ ಸಂಸ್ಥೆಗೆ ಅನುಕೂಲಕರವಾದ ತಪಾಸಣಾ ವರದಿ ನೀಡಲು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಡಾ. ಚೈತ್ರಾ, ಡಾ. ಮಂಜಪ್ಪ ಮತ್ತು ಡಾ. ಅಶೋಕ್ ಶೆಲ್ಕೆ ಅವರನ್ನು 2025ರ ಜುಲೈ 1ರಂದು ಬಂಧಿಸಿದ್ದರು. ಈ ಮೂವರೂ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ಸಿಬಿಐ ತನ್ನ ವರದಿಯಲ್ಲಿ ವಿವರಿಸಿದೆ. ಎಲ್ಲ ವಿಷಯಗಳನ್ನು ಕೂಲಂಕಶವಾಗಿ ಪರಿಶೀಲಿಸಿ ಅಮಾನತುಗೊಳಿಸಲಾಗಿದೆ ಎಂದೂ ಅವರು ಆದೇಶದಲ್ಲಿ ವಿವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.