ಬೆಳ್ತಂಗಡಿ: ರೈತ ಮುಖಂಡ, ಜನಪರ ಹೋರಾಟಗಾರ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ 55 ವರ್ಷಗಳ ರಾಜಕೀಯ ಜೀವನದ ಸಾಧನೆಯನ್ನು ಸಂಭ್ರಮಿಸುವ ಉದ್ದೇಶದಿಂದ ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಬೃಹತ್ ಅಭಿಮಾನೋತ್ಸವದ ಪೋಸ್ಟರ್ ಬಿಡುಗಡೆ ಸಮಾರಂಭವು ಗುರುವಾಯನಕೆರೆಯ ನಮ್ಮ ಮನೆ ಹವ್ಯಕ ಭವನದಲ್ಲಿ ಶನಿವಾರ ನೆರವೇರಿತು.

ಶಾಸಕ ಹರೀಶ್ ಪೂಂಜ ಅವರು ಪೋಸ್ಟರ್ ಬಿಡುಗಡೆಗೊಳಿಸಿ, ಬಿಜೆಪಿಯನ್ನು ಶಕ್ತಿಶಾಲಿಯಾಗಿ ರೂಪಿಸಿದ ಯಡಿಯೂರಪ್ಪ ಅವರು ಬೆಳ್ತಂಗಡಿ ತಾಲ್ಲೂಕಿಗೆ ಅವರ ಅಧಿಕಾರದ ಅವಧಿಯಲ್ಲಿ ಹಲವು ಅನುದಾನ ನೀಡಿದ್ದಾರೆ. 2028ರಲ್ಲಿ ವಿಜಯೇಂದ್ರ ಅವರ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಚಿತ್ರದುರ್ಗದಲ್ಲಿ ನಡೆಯುವ ಅಭಿಮಾನೋತ್ಸವ ಕಾರ್ಯಕ್ರಮ ಶಕ್ತಿಯಾಗಲಿದೆ. ಈ ಕಾರ್ಯಕ್ರಮಕ್ಕೆ ತಾಲ್ಲೂಕಿನಿಂದ 2500ಕ್ಕಿಂತ ಅಧಿಕ ಮಂದಿ ಭಾಗವಹಿಸಲಿದ್ದಾರೆ’ ಎಂದರು.

ಮಂಗಳೂರು ವಿಭಾಗ ಸಹ ಪ್ರಭಾರಿ ಜಯಂತ್ ಕೋಟ್ಯಾನ್, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವರ್, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ. ಪಾರೆಂಕಿ, ಮನ್ ಕೀ ಬಾತ್ ಪ್ರಮುಖ್ ಸೀತಾರಾಮ್ ಬೆಳಾಲು, ಜಿಲ್ಲಾ ಘಟಕದ ಕಾರ್ಯದರ್ಶಿ ವಸಂತಿ ಮಚ್ಚಿನ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-29-938168120

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.