ಗದಗ: ‘ಶಾಸಕ ಶ್ರೀರಾಮುಲು ವಿರುದ್ಧ ಸಿದ್ಧರಾಮಯ್ಯ ಅವರು 420 ಪದ ಬಳಸಿರುವುದು ಇಡೀ ವಾಲ್ಮೀಕಿ ಸಮಾಜಕ್ಕೆ ಅವಮಾನ ಮಾಡಿದಂತೆ. ಅವರ ಬಾಯಲ್ಲಿ ಇಂಥ ಮಾತು ನಿರೀಕ್ಷಿಸಿರಲಿಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಗುರುವಾರ ಇಲ್ಲಿನ ತೋಂಟದಾರ್ಯ ಮಠಕ್ಕೆ ಭೇಟಿ ನೀಡಿದ ಅವರು, ಲಿಂಗೈಕ್ಯರಾದ ತೋಂಟದ ಶ್ರೀಗಳ ಗದ್ದುಗೆ ದರ್ಶನ ಪಡೆದು, ನಮನ ಸಲ್ಲಿಸಿದರು.

‘ಶ್ರೀರಾಮುಲು ಮುಂದಿನ ಮುಖ್ಯಮಂತ್ರಿ ಎಂಬ ಸೋಮಣ್ಣ ಹೇಳಿಕೆ ಕುರಿತು ಸುದ್ದಿಗಾರರು ಪ್ರಶ್ನಿಸಿದಾಗ, ‘ಈ ವಿಚಾರ ನನಗೆ ಗೊತ್ತಿಲ್ಲ’ ಎಂದು ಹೇಳಿದರು.

‘ನಾವು ಆಪರೇಷನ್ ಕಮಲ ಮಾಡಲ್ಲ. ಆ ರೀತಿಯ ತೀರ್ಮಾನ ಆಗಿದೆ. ಬಿಜೆಪಿಗೆ ಶಾಸಕರ ಸಂಖ್ಯೆ 105 ಆದ ಮೇಲೆ ರಾಜ್ಯದ ರಾಜಕೀಯ ಚಿತ್ರಣ ಬದಲಾಗುತ್ತದೆ’ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

‘ಆಂತರಿಕ ಕಲಹದಿಂದ ಕಾಂಗ್ರೆಸ್‌ನಲ್ಲಿ ದಿನಕ್ಕೊಬ್ಬರು ಶಾಸಕರು ಬಂಡಾಯ ಏಳುತ್ತಿದ್ದಾರೆ. ಕುಮಾರಸ್ವಾಮಿ ಹಾಗೂ ರೇವಣ್ಣ ಅವರು ಕಾಂಗ್ರೆಸ್ ಶಾಸಕರ ಕೆಲಸ ಮಾಡಿಕೊಡುತ್ತಿಲ್ಲ ಅಂತ ಮಾತನಾಡುತ್ತಿದ್ದಾರೆ. ಕಾಂಗ್ರೆಸ್‌ನ ಅವನತಿ ಪ್ರಾರಂಭವಾಗಿದೆ’ ಎಂದರು.

‘ಸೋಮಣ್ಣ ಹೇಳಿಕೆಯಲ್ಲಿ ಯಾವುದೇ ಹುರುಳಿಲ್ಲ. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಚುನಾವಣೆ ನಡೆಯುತ್ತದೆ. ಹೈಕಮಾಂಡ್ ಅವರ ಮೇಲೆ ವಿಶ್ವಾಸವಿಟ್ಟಿದೆ. ಶಿವಮೊಗ್ಗ, ಬಳ್ಳಾರಿ, ಜಮಖಂಡಿಯನ್ನು ನಾವು ನೂರಕ್ಕೆ ನೂರರಷ್ಟು ಗೆಲ್ಲುತ್ತೇವೆ’ ಎಂದು ಶೋಭಾ ಕರಂದ್ಲಾಜೆ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.