ದಾವಣಗೆರೆ: ರಾಜ್ಯದಲ್ಲಿ ಬದಲಾವಣೆಗೆ ಕಾಲ ಕೂಡಿಬಂದಿದೆ. ಪಕ್ಷವನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಪ್ರಯತ್ನ ಶುರುವಾಗಿದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

‘ಅಭಿಮಾನೋತ್ಸವ’ಕ್ಕೆ ಚಿತ್ರದುರ್ಗಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜನರೇ ಮುಂದೆ ನಿಂತು ಪ್ರೀತಿ–ವಿಶ್ವಾಸದಿಂದ ಅಭಿಮಾನೋತ್ಸವ ಸಂಘಟಿಸಿದ್ದಾರೆ. ಇದಕ್ಕೆ ಎಲ್ಲರಿಗೂ ಋಣಿಯಾಗಿದ್ದೇನೆ’ ಎಂದರು.

‘ಕೇಂದ್ರದ ಮಾಜಿ ಸಚಿವರಾಗಿದ್ದ ಅನಂತಕುಮಾರ್ ಅವರೊಂದಿಗೆ ಸೈಕಲ್ ಮೇಲೆ ಓಡಾಡಿ ರಾಜ್ಯದಲ್ಲಿ ಪಕ್ಷ ಕಟ್ಟಿದೆವು. ಇದರ ಪರಿಣಾಮವಾಗಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಾಯಿತು’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

‘ದಕ್ಷಿಣ ಭಾರತದಲ್ಲಿ ಪಕ್ಷವನ್ನು ಬೆಳೆಸಿದ ಕೀರ್ತಿ ಯಡಿಯೂರಪ್ಪ ಅವರಿಗೆ ಸಲ್ಲುತ್ತದೆ. ಬಗರ್ಹುಕುಂ ಸಾಗುವಳಿ ಚೀಟಿ ಸೇರಿದಂತೆ ಹಲವು ವಿಚಾರಗಳಿಗೆ ಅವರು ಹೋರಾಟ ನಡೆಸಿದರು. ನಿರಂತರ ಭಿನ್ನಮತ, ಜಗಳಗಳ ನಡುವೆ ರಾಜಕೀಯ ಜೀವನ ನಡೆಸಿದರು. ಅವರೊಬ್ಬ ಅಜಾತಶತ್ರು ಎಂದು ಹೇಳಲು ಆಗದು’ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.