ಬೆಂಗಳೂರು: ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಲು ದೆಹಲಿಗೆ ಹೋಗುವುದಿಲ್ಲ, ರಾಜ್ಯಕ್ಕೆ ಇದೇ 17 ಮತ್ತು 18ರಂದು ಭೇಟಿ ನೀಡುವ ಸಂದರ್ಭದಲ್ಲಿ ಚರ್ಚಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಇಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್.ಡಿ.ಕುಮಾರಸ್ವಾಮಿ ಅವರು ಬಿಡುಗಡೆ ಮಾಡಿರುವ ಮಂಗಳೂರು ಗಲಭೆ ಕುರಿತ ಸಿ.ಡಿ. ಕಟ್ ಆ್ಯಂಡ್ ಪೇಸ್ಟ್ ಮಾಡಿದ ವಿಡಿಯೊ, ಇದರ ಬಗ್ಗೆ ಪ್ರತಿಕ್ರಿಯೆ ನೀಡುವುದರಲ್ಲಿ ಅರ್ಥವಿಲ್ಲ ಎಂದರು.

ಸಂಪುಟ ವಿಸ್ತರಣೆಗೆ ಮುನ್ನ ಕೆಲವರಿಗೆ ಕೊಕ್ ?

ಉಪ ಚುನಾವಣೆಯಲ್ಲಿ ಗೆದ್ದ ಎಲ್ಲ ಶಾಸಕರಿಗೂ (ಕಾಂಗ್ರೆಸ್– ಜೆಡಿಎಸ್‌ನಿಂದ ಬಂದವರು) ಮಂತ್ರಿ ಸ್ಥಾನ ನೀಡುವುದರ ಜತೆಗೆ ಪಕ್ಷದ ಪ್ರಭಾವಿ ಶಾಸಕರಿಗೂ ಸಂಪುಟದಲ್ಲಿ ಅವಕಾಶ ಕಲ್ಪಿಸಬೇಕಾಗಿದೆ. ಈ ಕಾರಣಕ್ಕೆ ಇಬ್ಬರು ಅಥವಾ ಮೂವರು ಸಚಿವರ ರಾಜೀನಾಮೆ ಪಡೆದರೆ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಪಕ್ಷದ ಮೂಲ ಶಾಸಕರಿಗೆ ಹೆಚ್ಚಿನ ಅವಕಾಶ ಸಿಗುತ್ತದೆ ಎಂಬುದು ಯಡಿಯೂರಪ್ಪ ಲೆಕ್ಕಾಚಾರ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:ಮುಖ್ಯಮಂತ್ರಿಯವರೇ, ಇದ್ಯಾವ ಸಂಸ್ಕೃತಿ?

ಯಾವ ಸಚಿವರಿಂದ ರಾಜೀನಾಮೆ ಪಡೆಯಬಹುದು ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಆರಂಭವಾಗಿದ್ದು, ಪಕ್ಷದ ನಿಷ್ಠಾವಂತ ಮತ್ತು ಸಚಿವ ಸ್ಥಾನ ಕಳೆದುಕೊಂಡ ಕಾರಣಕ್ಕೆ ಮುನಿಸಿಕೊಂಡು ಗದ್ದಲ ಎಬ್ಬಿಸದವರಿಂದ ರಾಜೀನಾಮೆ ಪಡೆಯಬಹುದು ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.