ಬೆಂಗಳೂರು: ಖಾಸಗಿ ನರ್ಸಿಂಗ್ ಕಾಲೇಜುಗಳ ಬಿ.ಎಸ್ಸಿ (ನರ್ಸಿಂಗ್) ಕೋರ್ಸ್ನ ಶೇ 80 ಸೀಟುಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕ ಭರ್ತಿ ಮಾಡಲಿದೆ.

ಹೊಸ ನಿಯಮ ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಜಾರಿಗೆ ಬರಲಿದ್ದು, ಕಾಲೇಜಿಗೆ ನಿಗದಿಪಡಿಸಿರುವ ಒಟ್ಟು ಸೀಟುಗಳಲ್ಲಿ ಶೇ 20ರಷ್ಟು ಮಾತ್ರ ಆಡಳಿತ ಮಂಡಳಿಗಳು ನೇರವಾಗಿ ಭರ್ತಿ ಮಾಡಿಕೊಳ್ಳಬಹುದು. ಶೇ 20ರಷ್ಟು ಸರ್ಕಾರಿ ಕೋಟಾ ಹಾಗೂ ಶೇ 60ರಷ್ಟು ಆಡಳಿತ ಮಂಡಳಿ ಸೀಟುಗಳನ್ನು ಕೆಇಎ ಭರ್ತಿ ಮಾಡುತ್ತದೆ.

ಖಾಸಗಿ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ₹10 ಸಾವಿರ ಶುಲ್ಕ ಹಾಗೂ ಕೆಇಎ ಮೂಲಕ ಭರ್ತಿ ಮಾಡುವ ಆಡಳಿತ ಮಂಡಳಿ ಕೋಟಾದಡಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ₹1 ಲಕ್ಷ ಹಾಗೂ ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ₹1.40 ಲಕ್ಷ ಗರಿಷ್ಠ ಶುಲ್ಕ ನಿಗದಿ ಮಾಡಲಾಗಿದೆ.

ಕರ್ನಾಟಕ ನರ್ಸಿಂಗ್ ಕಾಲೇಜು ಆಡಳಿತ ಮಂಡಳಿಗಳ ಸಂಘ, ಆರೋಗ್ಯ ವಿಜ್ಞಾನಗಳ ಸಂಸ್ಥೆಗಳು ಹಾಗೂ ನವ ಕರ್ನಾಟಕ ನರ್ಸಿಂಗ್ ಆಡಳಿತ ಮಂಡಳಿಯ ಸಂಘದ ಪದಾಧಿಕಾರಿಗಳ ಜೊತೆ ಈಚೆಗೆ ನಡೆದ ಸಭೆಯಲ್ಲಿ ಸರ್ವಸಮ್ಮತದ ನಿರ್ಧಾರಕ್ಕೆ ಬರಲಾಯಿತು ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.