ಬೆಂಗಳೂರು: ಬಿ.ಎಸ್ಸಿ ನರ್ಸಿಂಗ್ ಕೋರ್ಸ್ಗಳ ಶುಲ್ಕವನ್ನು 2025–26ನೇ ಸಾಲಿಗೆ ಹೆಚ್ಚಳ ಮಾಡುವುದಿಲ್ಲ. ನಿಗದಿಗಿಂತ ಅಧಿಕ ಶುಲ್ಕ ಪಡೆಯುವ ಕಾಲೇಜುಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.

ನರ್ಸಿಂಗ್ ಕಾಲೇಜುಗಳ ಸಂಘದ ಪದಾಧಿಕಾರಿಗಳ ಜತೆ ಗುರುವಾರ ನಡೆದ ಸಭೆಯ ಬಳಿಕ ಮಾತನಾಡಿದ ಅವರು, ಆರ್ಥಿಕವಾಗಿ ದುರ್ಬಲ ವರ್ಗ ಹಾಗೂ ಗ್ರಾಮೀಣ ವಿದ್ಯಾರ್ಥಿಗಳೇ ಅಧಿಕ ಸಂಖ್ಯೆಯಲ್ಲಿ ನರ್ಸಿಂಗ್ ಕೋರ್ಸ್ಗಳಿಗೆ ಸೇರುತ್ತಾರೆ. ಅಂತಹ ವಿದ್ಯಾರ್ಥಿಗಳ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಶುಲ್ಕ ಹೆಚ್ಚಳಕ್ಕೆ ಸಮ್ಮತಿ ನೀಡಿಲ್ಲ ಎಂದರು.

ಅನುಮೋದಿತ ಶುಲ್ಕಕ್ಕಿಂತ ಹೆಚ್ಚಿನ ಶುಲ್ಕ ಪಡೆದ ಪ್ರಕರಣಗಳು ಕಂಡುಬಂದರೆ ಕಾನೂನು ಕ್ರಮ ಕೈಗೊಳ್ಳುವ ಜತೆಗೆ, ಅಂತಹ ಕಾಲೇಜುಗಳ ಮಾನ್ಯತೆಯನ್ನೂ ರದ್ದುಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಹಂಚಿಕೆಯಾಗದ ಉಳಿಕೆ ಸೀಟುಗಳನ್ನು ಭರ್ತಿ ಮಾಡುವ ಕುರಿತು ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ. ಯಾವುದೇ ಅನಧಿಕೃತ ಬದಲಾವಣೆಗಳಿಗೆ ಅವಕಾಶವಿಲ್ಲ. ಈ ಬಗ್ಗೆ ಕಟ್ಟುನಿಟ್ಟಿನ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಅವರಿಗೆ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.