ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಳ್ಳೇಗಾಲ| ನಾಮಪತ್ರ ವಾಪಸ್‌ ಪಡೆದ ಬಿಎಸ್‌ಪಿ ಅಭ್ಯರ್ಥಿ ರೇಖಾ: ಕಾಂಗ್ರೆಸ್‌ಗೆ ಬೆಂಬಲ

ಹೈಕಮಾಂಡ್‌ ಸೂಚನೆಯಂತೆ ನಿರ್ಧಾರ| ಎನ್‌.ಮಹೇಶ್‌ ಸೋಲಿಸುವ ಗುರಿ
Published 24 ಏಪ್ರಿಲ್ 2023, 15:14 IST
Last Updated 24 ಏಪ್ರಿಲ್ 2023, 15:14 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಬಹುಜನ ಸಮಾಜ ಪಕ್ಷದ ಅಭ್ಯರ್ಥಿ ರೇಖಾ ನಾಮಪತ್ರ ವಾಪಸ್‌ ಪಡೆದು ಅಚ್ಚರಿ ಮೂಡಿಸಿದ್ದಾರೆ. 

ಬಿಎಸ್‌ಪಿ ಬಾಹುಳ್ಯವಿರುವ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಎನ್‌.ಮಹೇಶ್‌ ಗೆಲ್ಲುವುದರೊಂದಿಗೆ ವಿಧಾನಸಭೆಯಲ್ಲಿ ಪಕ್ಷ ಖಾತೆ ತೆರೆದಿತ್ತು. ಜೆಡಿಎಸ್‌– ಕಾಂಗ್ರೆಸ್‌ ಮೈತ್ರಿ ಸರ್ಕಾರ ಪತನವಾದ ಬಳಿಕ ಎನ್‌.ಮಹೇಶ್‌ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಬಳಿಕ ಅವರು ಬಿಜೆಪಿ ಸೇರಿದ್ದರು. ಈ ಬಾರಿ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. 

ಎನ್‌.ಮಹೇಶ್‌ ದೂರವಾದ ಬಳಿಕ ಕ್ಷೇತ್ರದಲ್ಲಿ ಪಕ್ಷದ ಹಿಡಿತ ಕೊಂಚ ಕಡಿಮೆಯಾದಂತೆ ಕಂಡು ಬಂದರೂ, ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿಯೇ ಇದ್ದಾರೆ. ಪಕ್ಷದ ರಾಜ್ಯ ಕಾರ್ಯದರ್ಶಿ ಕಮಲ್‌ ನಾಗರಾಜು ಹಾಗೂ ಅವರ ಪತ್ನಿ ರೇಖಾ ನಾಮಪತ್ರ ಸಲ್ಲಿಸಿದ್ದರು. ಕಮಲ್‌ ನಾಮಪತ್ರ ತಿರಸ್ಕೃತವಾಗಿದ್ದರೆ. ರೇಖಾ ಉಮೇದುವಾರಿಕೆ ಕ್ರಮಬದ್ಧವಾಗಿತ್ತು. 

ದಿಢೀರ್‌ ಬೆಳವಣಿಗೆಯಲ್ಲಿ ರೇಖಾ ಸೋಮವಾರ ನಾಮಪತ್ರ ವಾಪಸ್‌ ಪಡೆದಿದ್ದಾರೆ.

‘ಹೈಕಮಾಂಡ್‌ ಸೂಚನೆಯಂತೆ ಅಭ್ಯರ್ಥಿ ನಾಮಪತ್ರ ವಾಪಸ್‌ ಪಡೆದಿದ್ದಾರೆ. ಪಕ್ಷಕ್ಕೆ ಮೋಸ ಮಾಡಿರುವ ಎನ್‌.ಮಹೇಶ್‌ ಅವರನ್ನು ಸೋಲಿಸುವ ಗುರಿಯೊಂದಿಗೆ ನಿರ್ಧಾರ ಕೈಗೊಳ್ಳಲಾಗಿದೆ. ಬಿಎಸ್‌ಪಿಯು ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಎ.ಆರ್‌.ಕೃಷ್ಣಮೂರ್ತಿ ಅವರನ್ನು ಬೆಂಬಲಿಸಲಿದೆ’ ಎಂದು‌ ಬಿಎಸ್‌ಪಿ ಮುಖಂಡರು ಮಾಹಿತಿ ನೀಡಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT