ಹೊಸಪೇಟೆ (ವಿಜಯನಗರ): ರಾಜ್ಯ ಕಂಡ ಅಪ್ರತಿಮ ಹೋರಾಟಗಾರ, ರೈತ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ರಾಜಕೀಯಕ್ಕೆ ಧುಮುಕಿ 50 ವರ್ಷ ತುಂಬಿದ್ದು, ಅವರ ಹೋರಾಟದ ಕೆಚ್ಚನ್ನು ಜನತೆಗೆ ಮತ್ತೆ ನೆನಪಿಸುವ ಸಲುವಾಗಿ ಚಿತ್ರದುರ್ಗದಲ್ಲಿ ಮೇ 9ರಂದು ಬಿಎಸ್ವೈ ಅಭಿಮಾನೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಇಲ್ಲಿ ಬುಧವಾರ ವಿಜಯನಗರ, ಕೊಪ್ಪಳ, ಬಳ್ಳಾರಿ ಜಿಲ್ಲೆಗಳ ಪಕ್ಷದ ಮುಖಂಡರ ಸಭೆ ನಡೆಸಿ ಅಭಿಮಾನೋತ್ಸವದ ಸಿದ್ಧತೆಗಳ ಕುರಿತು ಸಮಾಲೋಚನೆ ನಡೆಸಿದ ಅವರು ಮಾಧ್ಯಮದವರಿಗೆ ಈ ವಿಷಯ ತಿಳಿಸಿದರು.

ರಾಜ್ಯದ ಮೂಲೆ ಮೂಲೆಗಳಿಂದ 8ರಿಂದ 10 ಲಕ್ಷ ಮಂದಿ ಸಮಾವೇಶದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಕೇಂದ್ರದ ಗೃಹ ಸಚಿವ ಅಮಿತ್ ಷಾ ಪಾಲ್ಗೊಳ್ಳಲಿದ್ದಾರೆ. ಯಡಿಯೂರಪ್ಪ ಅವರು ಒಂದು ಸಮುದಾಯಕ್ಕೆ ಸೇರಿದ ನಾಯಕರಲ್ಲ, ಹೀಗಾಗಿ ಅವರ ಅಭಿಮಾನೋತ್ಸವ ಅತ್ಯಂತ ಅದ್ದೂರಿಯಾಗಿ, ಎಲ್ಲಾ ವರ್ಗದ ಜನರ ಸಮ್ಮುಖದಲ್ಲಿ ನಡೆಯಲಿದೆ. ನಾಡಿನ ಎಲ್ಲಾ ಜಗದ್ಗುರುಗಳು, ಹರಚರಮೂರ್ತಿಗಳು ವೇದಿಕೆ ಮೇಲೆ ಇರಲಿದ್ದಾರೆ ಎಂದರು.

ಪ್ರಭಾಕರ ಕೋರೆ ಅವರ ಅಧ್ಯಕ್ಷತೆಯಲ್ಲಿ ಹಾಗೂ ಗೋವಿಂದ ಕಾರಜೋಳ, ಕೋಟ ಶ್ರೀನಿವಾಸ ಪೂಜಾರಿ ಹಾಗೂ ಶ್ರೀರಾಮುಲು ಅವರ ನೇತೃತ್ವದಲ್ಲಿ ಈ ಸಮಾವೇಶ ನಡೆಯಲಿದೆ ಎಂದರು.

ಬಳಿಕ ನಡೆದ ಸಿದ್ಧತಾ ಸಭೆಯಲ್ಲಿ ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವ ಬಿ.ಶ್ರೀರಾಮುಲು, ವಿಧಾನಸಭೆಯ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್, ಶಾಸಕರಾಧ ಗಾಲಿ ಜನಾರ್ದನ ರೆಡ್ಡಿ, ಕೃಷ್ಣ ನಾಯ್ಕ್, ವಿಧಾನ ಪರಿಷತ್ ಸದಸ್ಯರಾದ ಎನ್.ರವಿಕುಮಾರ್, ವೈಎಂ.ಸತೀಶ್, ಹೇಮಲತಾ ನಾಯಕ್, ಮುಖಂಡರಾದ ಹಾಲಪ್ಪ ಆಚಾರ್, ಪಿ.ರಾಜೀವ್, ಶರಣು ತಳ್ಳಿಕೆರೆ, ಸುರೇಶ್ ಬಾಬು, ಸೋಮಲಿಂಗಪ್ಪ, ಕೆ.ಎಸ್.ದಿವಾಕರ್, ಬಸವರಾಜ ಕ್ಯಾವಟರ್, ಅಮರನಾಥ್ ಪಾಟೀಲ್, ಚನ್ನಬಸವನಗೌಡ ಪಾಟೀಲ್, ಅರುಣ್ ಶಹಾಪುರ್, ಬಲ್ಲಾಹುಣ್ಸಿ ರಾಮಣ್ಣ, ಎಸ್. ಸಂಜೀವ ರೆಡ್ಡಿ, ಅನಿಲ್ ಕುಮಾರ್ ಮೋಕ, ನವೀನ್ ಗುಳಗಣ್ಣವರ, ಬಸವರಾಜ ದಡೇಸುಗೂರು, ಸೋಮಶೇಖರ ರೆಡ್ಡಿ, ಪರಣ್ಣ ಮುನವಳ್ಳಿ, ಸುರೇಶ್ ಬಾಬು, ಸೋಮಲಿಂಗಪ್ಪ ಇದ್ದರು.

ಇದಕ್ಕೆ ಮೊದಲು ವಿಜಯೇಂದ್ರ ಮತ್ತು ಇತರ ಹಲವು ಮುಖಂಡರು ಕೊಟ್ಟೂರುಸ್ವಾಮಿ ಮಠಕ್ಕೆ ಹೋಗಿ ಬಸವಲಿಂಗ ಸ್ವಾಮೀಜಿಗಳ ಆಶೀರ್ವಾದ ಪಡೆದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-25-260554287

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.