ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಪರ ಹಾಜರಾಗಿದ್ದ ಅಶೋಕ್ ಎನ್.ನಾಯಕ್ ಅವರು, ‘ಈ ಪ್ರಕರಣದಲ್ಲಿ ಸರ್ಕಾರವು ವಿಶೇಷ ಪ್ರಾಸಿಕ್ಯೂಟರ್ ಆಗಿ ಹಿರಿಯ ವಕೀಲ ರವಿವರ್ಮ ಕುಮಾರ್ ಅವರನ್ನು ನೇಮಕ ಮಾಡಿದೆ. ಅವರಿಗೆ ಪ್ರಕರಣದ ಮಾಹಿತಿ ನೀಡಬೇಕಿರುವ ಕಾರಣ ವಿಚಾರಣೆ ಮುಂದೂಡಬೇಕು’ ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಮೂರ್ತಿಗಳು ವಿಚಾರಣೆಯನ್ನು ಇದೇ 19ಕ್ಕೆ ಮುಂದೂಡಿದರು.