ಬೆಂಗಳೂರು: ಪೋಕ್ಸೊ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕೋರ್ಟ್ಗೆ ಬರಮಾಡಿಕೊಂಡು ವಿಚಾರಣೆ ನಡೆಸುವ ನ್ಯಾಯಿಕ ಪ್ರಕ್ರಿಯೆ ಜರುಗಿಸುವ ನಿಟ್ಟಿನಲ್ಲಿ ಜಾರಿಗೊಳಿಸಲಾಗಿದ್ದ ಸಮನ್ಸ್ ರದ್ದುಪಡಿಸಲು ಹೈಕೋರ್ಟ್ ಸ್ಪಷ್ಟವಾಗಿ ನಿರಾಕರಿಸಿದೆ.

‘ಪೋಕ್ಸೊ ಅಪರಾಧಕ್ಕೆ ಸಂಬಂಧಿಸಿದಂತೆ ನಮ್ಮ ವಿರುದ್ಧದ ಆರೋಪಗಳನ್ನು ಪರಿಗಣಿಸಿ ಬೆಂಗಳೂರಿನ ಎಫ್ಟಿಎಸ್ ವಿಶೇಷ ಕೋರ್ಟ್–I ಹೊರಡಿಸಿರುವ ಸಮನ್ಸ್ ಜಾರಿ ಆದೇಶವನ್ನು ರದ್ದುಗೊಳಿಸಬೇಕು’ ಎಂದು ಕೋರಿ ಯಡಿಯೂರಪ್ಪ, ವೈ.ಎಂ.ಅರುಣ, ಎಂ.ರುದ್ರೇಶ ಹಾಗೂ ಜಿ.ಮರಿಸ್ವಾಮಿ ಸಲ್ಲಿಸಿದ್ದ ಎರಡು ಪ್ರತ್ಯೇಕ ರಿಟ್ ಅರ್ಜಿಗಳನ್ನು ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿ ಈ ಕುರಿತಂತೆ ಗುರುವಾರ ಆದೇಶಿಸಿದೆ.

ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ಆದ ಪದಾಂಕಿತ ಹಿರಿಯ ವಕೀಲ ರವಿವರ್ಮ ಕುಮಾರ್ ಹಾಗೂ ಅಶೋಕ್ ಎನ್.ನಾಯಕ್ ಅವರ ವಾದವನ್ನು ಮನ್ನಿಸಿರುವ ನ್ಯಾಯಪೀಠ, ‘ಯಡಿಯೂರಪ್ಪ ಅವರ ಹಾಜರಿ ಅಗತ್ಯವಿಲ್ಲ ಎಂದಾದರೆ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಒತ್ತಾಯಿಸಬಾರದು. ವಿನಾಯತಿ ಮನವಿಯನ್ನು ಪುರಸ್ಕರಿಸಬೇಕು. ಈ ನ್ಯಾಯಪೀಠ ಮತ್ತು ಸಕ್ಷಮ ನ್ಯಾಯಾಲಯದ ಆದೇಶಗಳಲ್ಲಿ ಉಲ್ಲೇಖಿಸಲಾದ ಅಂಶಗಳ ಪ್ರಭಾವಕ್ಕೆ ಒಳಗಾಗದೇ ತನ್ನ ಮುಂದಿರುವ ಸಾಕ್ಷ್ಯಾಧಾರಗಳನ್ನು ಆಧರಿಸಿಪ್ರಕರಣವನ್ನು ನಿರ್ಧರಿಸಬೇಕು’ ಎಂದು ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶಿಸಿದೆ.

ಪ್ರಕರಣವೇನು?

‘ನನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ನನಗೆ ನ್ಯಾಯ ಕೊಡಿಸಿ’ ಎಂದು ಬೇಡಿ ಆರ್ಎಂವಿ ಎರಡನೇ ಹಂತದಲ್ಲಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ಅವರ ‘ಧವಳಗಿರಿ’ ನಿವಾಸಕ್ಕೆ ತಾಯಿಯೊಬ್ಬರು (ಈಗ ಬದುಕಿಲ್ಲ) ಬಂದಿದ್ದರು.

‘ಈ ಸಂದರ್ಭದಲ್ಲಿ ಯಡಿಯೂರಪ್ಪ ಅವರು ನನ್ನ 14 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡುವುದಾಗಿ ತಿಳಿಸಿ ಆಕೆಯನ್ನು ತಮ್ಮ ಕೋಣೆಯೊಳಗೆ ಕರೆದುಕೊಂಡು ಹೋಗಿ ಕಾಮಪೀಡಿತ ದುರ್ವರ್ತನೆ ತೋರಿದ್ದಾರೆ. 2024ರ ಫೆಬ್ರುವರಿ 2ರಂದು ಬೆಳಗ್ಗೆ 11ರಿಂದ 11.30ರ ನಡುವೆ ಈ ಘಟನೆ ನಡೆದಿದೆ’ ಎಂದು ಆರೋಪಿಸಿ ಬಾಲಕಿಯ ತಾಯಿ ಸದಾಶಿವನಗರದ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಇದನ್ನು ಗಮನಿಸಿಕೊಂಡ ಪೊಲೀಸರು ‘ಕಾನೂನಿನ ಚೌಕಟ್ಟಿನಲ್ಲಿ ಅಪರಾಧ ನಡೆದಿದೆ’ ಎಂದು ಭಾರತೀಯ ದಂಡ ಸಂಹಿತೆ–1860ರ ಕಲಂ 354 ಎ, 204, 214 ಹಾಗೂ 37 ಮತ್ತು ಪೋಕ್ಸೊ-2012ರ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ) ಕಲಂ 8ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿ ವಿಚಾರಣಾ ನ್ಯಾಯಾಲಯಕ್ಕೆ ರವಾನಿಸಿದ್ದರು.

ಇದರ ಅನುಸಾರ ‘ಅಪರಾಧ ಜರುಗಿದೆ ಮತ್ತು ಪೊಲೀಸರು ಕ್ರಮ ಜರುಗಿಸಬಹುದಾಗಿದೆ’ ಎಂದು ಪರಿಗಣಿಸಿದ್ದ ವಿಶೇಷ ನ್ಯಾಯಾಲಯ, 2025ರ ಫೆಬ್ರುವರಿ 28ರಂದು ಯಡಿಯೂರಪ್ಪ ಮತ್ತು ಇತರರಿಗೆ ಸಮನ್ಸ್ ಜಾರಿಗೊಳಿಸಿ ಆದೇಶಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.