ಶಿವಮೊಗ್ಗ: ‘ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ 50 ವರ್ಷದ ರಾಜಕೀಯ ಜೀವನವೇ ಒಂದು ಪಾಠ. ಅದನ್ನು ಇಂದಿನ ಪೀಳಿಗೆಗೆ ತಲುಪಿಸಲು ಮೇ 9ರಂದು ಚಿತ್ರದುರ್ಗದಲ್ಲಿ ಬಿಎಸ್ವೈ ಅಭಿಮಾನೋತ್ಸವ ಆಯೋಜಿಸಲಾಗಿದೆ’ ಎಂದು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ತಿಳಿಸಿದರು.

‘ಬಿ.ಎಸ್.ಯಡಿಯೂರಪ್ಪ ಅವರು ಹೋರಾಟ, ಸಿದ್ಧಾಂತಗಳ ಮೂಲಕ ಬಿಜೆಪಿ ಕಟ್ಟಿದವರು. ಒಂದು ಕಾಲದಲ್ಲಿ ಲಿಂಗಾಯತ, ಒಕ್ಕಲಿಗ, ಬ್ರಾಹ್ಮಣರ ಪಕ್ಷ ಎಂಬ ಹಣೆ ಪಟ್ಟಿ ಹೊಂದಿದ್ದ ಪಕ್ಷಕ್ಕೆ ಎಲ್ಲರನ್ನೂ ಒಗ್ಗೂಡಿಸಿ ಜಾತ್ಯತೀತ ಪಕ್ಷದ ಸ್ವರೂಪ ಕೊಟ್ಟವರು. ರೈತರ ಸಾಲ ಮನ್ನಾ, ರೈತರ ಪರ ಬಜೆಟ್ ಮಂಡನೆ, ಮಹಿಳೆಯರಿಗೆ ಭಾಗ್ಯಲಕ್ಷ್ಮಿ, ಹೈಸ್ಕೂಲ್ ವಿದ್ಯಾರ್ಥಿನಿಯರಿಗೆ ಸೈಕಲ್ ವಿತರಣೆ ಮೊದಲಾದ ಜನಪರ ಯೋಜನೆಗಳನ್ನು ಕೊಟ್ಟ ಶ್ರೇಯ ಅವರದ್ದು’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಬಣ್ಣಿಸಿದರು.

‘ಈಗ ರಾಜಕಾರಣದಲ್ಲಿ ಸಿದ್ಧಾಂತಗಳ ಜಾಗದಲ್ಲಿ ಜಾತಿ, ಹಣ ಬಂದು ನಿಂತಿದೆ. ಬಹಳ ಬೇಗ ರಾಜಕೀಯದಲ್ಲಿ ಮೇಲೇರಲು ಅಡ್ಡದಾರಿ ಹಿಡಿಯುತ್ತಿದ್ದಾರೆ. ಈ ಹೊತ್ತಿನಲ್ಲಿ ಯಡಿಯೂರಪ್ಪ ಅವರು ತಮ್ಮ ರಾಜಕೀಯ ಬದುಕಿನಲ್ಲಿ ಅನೇಕ ಮಾನವೀಯ ಮೌಲ್ಯಗಳೊಂದಿಗೆ ಕೆಲಸ ಮಾಡಿದ್ದಾರೆ. ರಾಜ್ಯ ಅವರ ಕಾಲಾವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಂಡಿದೆ’ ಎಂದರು.

‘ಯಡಿಯೂರಪ್ಪ ತಾವು ಘೋಷಿಸಿದ ಯೋಜನೆಗಳ ಅನುಷ್ಠಾನಕ್ಕೆ ಅಧಿಕಾರಿಗಳ ಬೆನ್ನತ್ತಿ ಕೆಲಸ ಮಾಡಿಸುತ್ತಿದ್ದ ಛಲಗಾರರು. ನಿಂತಲ್ಲೇ ನೀತಿ ನಿರೂಪಣೆ ಮಾಡುತ್ತಿದ್ದ ಅವರಂತಹ ಮುಖ್ಯಮಂತ್ರಿಯನ್ನು ನೋಡಿಲ್ಲ’ ಎಂದರಲ್ಲದೇ, ತಮ್ಮ ಹಾಗೂ ಯಡಿಯೂರಪ್ಪ ಅವರ ನಡುವಿನ ರಾಜಕೀಯ ಜೀವನದ ಅನುಭವಗಳನ್ನು ಬಿಚ್ಚಿಟ್ಟರು.

‘ಮೇ 9ರಂದು ಬೆಳಿಗ್ಗೆ 11 ಗಂಟೆಗೆ ಆರಂಭವಾಗುವ ಬಿಎಸ್ವೈ ಅಭಿಮಾನೋತ್ಸವದ ಅಧ್ಯಕ್ಷತೆಯನ್ನು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಎಚ್.ಡಿ. ಕುಮಾರಸ್ವಾಮಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಸಂಸದರಾದ ಬಿ.ವೈ.ರಾಘವೇಂದ್ರ, ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಪಾಲ್ಗೊಳ್ಳುವರು’ ಎಂದು ಮಾಹಿತಿ ನೀಡಿದರು.

‘ಕಾರ್ಯಕ್ರಮದ ಸಾನಿಧ್ಯವನ್ನು ರಂಭಾಪುರಿ ಪೀಠದ ಜಗದ್ಗುರು ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ, ಸಿರಿಗೆರೆಯ ತರಳಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಉಜ್ಜಿನಿಯ ಸಿದ್ಧಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಕೇದಾರನಾಥದ ಭೀಮಾಶಂಕರ ಶಿವಾಚಾರ್ಯ ಸ್ವಾಮೀಜಿ, ಆದಿಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿ ವಹಿಸಲಿದ್ದಾರೆ’ ಎಂದರು.

‘ಕೇಂದ್ರ ಗೃಹಸಚಿವ ಅಮಿತ್ ಶಾ ಮಧ್ಯಾಹ್ನ 3.30ಕ್ಕೆ ಸಮಾವೇಶಕ್ಕೆ ಆಗಮಿಸಲಿದ್ದು, ಅಭಿನಂದನಾ ಭಾಷಣ ಮಾಡಲಿದ್ದಾರೆ. ಶಿವಮೊಗ್ಗ ಜಿಲ್ಲೆಯಿಂದ ಸುಮಾರು 60 ಸಾವಿರ ಕಾರ್ಯಕರ್ತರು ಸೇರಿದಂತೆ ರಾಜ್ಯದ ಮೂಲೆಮೂಲೆಗಳಿಂದ ಅಂದಾಜು 10 ಲಕ್ಷ ಕಾರ್ಯಕರ್ತರು ಸಮಾವೇಶಕ್ಕೆ ಬರಲಿದ್ದಾರೆ. ಅವರೆಲ್ಲರಿಗೂ ಮಧ್ಯಾಹ್ನದ ಭೋಜನದ ವ್ಯವಸ್ಥೆ ಮಾಡಲಾಗಿದೆ’ ಎಂದು ವಿವರಿಸಿದರು.

‘ಮೇ 8ರ ಸಂಜೆ ಯಡಿಯೂರಪ್ಪ ಅವರ ಪುರಪ್ರವೇಶ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ತಿಳಿಸಿದರು.

ಶಾಸಕರಾದ ಡಿ.ಎಸ್.ಅರುಣ್, ಡಾ.ಧನಂಜಯ ಸರ್ಜಿ, ಮಾಜಿ ಶಾಸಕರಾದ ಕೆ.ಬಿ.ಅಶೋಕ್ ನಾಯ್ಕ, ಎಸ್.ರುದ್ರೇಗೌಡ, ಆರ್.ಕೆ.ಸಿದ್ದರಾಮಣ್ಣ, ಕೆ.ಜಿ.ಕುಮಾರಸ್ವಾಮಿ, ಪ್ರಮುಖರಾದ ಎಸ್.ದತ್ತಾತ್ರಿ, ಎಸ್.ಎಸ್.ಜ್ಯೋತಿಪ್ರಕಾಶ್, ಬಿಳಕಿ ಕೃಷ್ಣಮೂರ್ತಿ, ಮಂಗೋಟೆ ರುದ್ರೇಶ್, ಸಂತೋಷ್ ಬಳ್ಳೇಕೆರೆ, ಎಸ್.ಚಂದ್ರಶೇಖರ್, ಎನ್.ಮಂಜುನಾಥ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-42-292896327

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.