ಕಲಬುರ್ಗಿ: ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ನಾಲ್ಕು ಜನರ ಮೇಲಿನ ಎಫ್ಐಆರ್ ರದ್ದು ಕೋರಿ ಸಲ್ಲಿಕೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ಕಾಯ್ದಿರಿಸಿದ್ದ ಕರ್ನಾಟಕ ಹೈಕೋರ್ಟ್ ಕಲಬುರ್ಗಿ ಪೀಠವು ಪೊಲೀಸರ ವಿಚಾರಣೆಗೆ ಮಧ್ಯಂತರ ತಡೆಯಾಜ್ಞೆ ನೀಡಿತು.

ಯಾವುದೇ ಪೊಲೀಸ್ ವಿಚಾರಣೆಮಾಡುವಂತಿಲ್ಲ ಎಂದು ನ್ಯಾಯಮೂರ್ತಿ ಪಿ.ಜಿ.ಎಂ.ಪಾಟೀಲ ಅವರು ಶುಕ್ರವಾರ ಆದೇಶ ನೀಡಿದರು.

ಎಫ್ಐಆರ್ ರದ್ದತಿಗೆ ಸಂಬಂಧಿಸಿದಂತೆ ಪ್ರಕರಣದ ವಿಚಾರಣೆ ಬಾಕಿ ಇದೆ. ಆದರೆ, ಯಾವುದೇ ರೀತಿಯ ತನಿಖೆ ನಡೆಸದಂತೆ ನ್ಯಾಯಮೂರ್ತಿಗಳು ಆದೇಶ ನೀಡಿದ್ದಾರೆ. ದೂರುದಾರ ಶರಣಗೌಡ ಕಂದಕೂರ ಅವರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ಅವರು ತಮ್ಮ ಪರ ವಕೀಲರೊಂದಿಗೆ ಹಾಜರಾಗುವಂತೆ ಆದೇಶಿಸಿದೆ ಎಂದು ಯಡಿಯೂರಪ್ಪ ಪರ ವಕೀಲ ಸಂಜಯ್ ಕುಲಕರ್ಣಿ ತಿಳಿಸಿದರು.

ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಅವರ ಪುತ್ರ ಶರಣಗೌಡ ನೀಡಿರುವ ದೂರಿಗೆ ಸಂಬಂಧಿಸಿದ ಎಫ್‌ಐಆರ್ ರದ್ದುಪಡಿಸುವಂತೆ ಸಲ್ಲಿಕೆಯಾಗಿದ್ದಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ನ ಕಲಬುರ್ಗಿ ಪೀಠವು ತೀರ್ಪನ್ನು ಕಾಯ್ದಿರಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.