ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಜೆಟ್‌ ಅಧಿವೇಶನ: ಮುಂದುವರಿದ ಗದ್ದಲ, ಶುಕ್ರವಾರ ಮಧ್ಯಾಹ್ನಕ್ಕೆ ಕಲಾಪ ಮುಂದೂಡಿಕೆ

Last Updated 7 ಫೆಬ್ರುವರಿ 2019, 10:57 IST
ಅಕ್ಷರ ಗಾತ್ರ

ಬೆಂಗಳೂರು:ವಿಧಾನಸಭೆಯಲ್ಲಿ ಬಿಜೆಪಿ ಪ್ರತಿಭಟನೆ ಮುಂದುವರಿಸಿದ ಹಿನ್ನೆಲೆಸಭಾಧ್ಯಕ್ಷ ಕೆ.ಆರ್‌.ರಮೇಶ್‌ಕುಮಾರ್‌ ಅವರುಕಲಾಪವನ್ನು ನಾಳೆ (ಶುಕ್ರವಾರ) ಮಧ್ಯಾಹ್ನ 12.30ಕ್ಕೆ ಮುಂದೂಡಿದರು.

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ರಾಜ್ಯಪಾಲರ ಭಾಷಣದ ಮೇಲೆಚರ್ಚೆ ಆರಂಭಿಸುತ್ತಿದ್ದಂತೆ ಬಿಜೆಪಿ ಶಾಸಕರು ಪ್ರತಿಭಟನೆಗೆ ಮುಂದಾದರು. ‘ಬಹುಮತವಿಲ್ಲದ ಸರ್ಕಾರಕ್ಕೆ ಧಿಕ್ಕಾರ, ಧಿಕ್ಕಾರ’ಎಂದು ಘೋಷಣೆ ಕೂಗಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್‌ ಶಾಸಕರು, ‘ಸಂವಿಧಾನ ವಿರೋಧಿ’, ‘ದಲಿತ ವಿರೋಧಿಬಿಜೆಪಿಗೆ ಧಿಕ್ಕಾರ, ಬ್ಲೂ ಫಿಲಂ ವೀಕ್ಷಿಸುವ ಬಿಜೆಪಿಯವರಿಗೆ ಧಿಕ್ಕಾರ’ ಎಂದು ತಿರುಗೇಟು ನೀಡಿದರು.

ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರು ಸದನದ ಬಾವಿಗೆ ಇಳಿದು ಪ್ರತಿಭಟನೆ ಮಾಡುತ್ತಿರುವುದು (ಪ್ರಜಾವಾಣಿ ಚಿತ್ರ)
ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರು ಸದನದ ಬಾವಿಗೆ ಇಳಿದು ಪ್ರತಿಭಟನೆ ಮಾಡುತ್ತಿರುವುದು (ಪ್ರಜಾವಾಣಿ ಚಿತ್ರ)

‘ಈ ಸರ್ಕಾರಕ್ಕೆ ರಾಜ್ಯಪಾಲರು ಮಾಡಿದ್ದ ಭಾಷಣದ ಮೇಲೆ ಚರ್ಚೆ ಮಾಡಲು ನೈತಿಕತೆ ಇಲ್ಲ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

‘ಕಾಂಗ್ರೆಸ್‌ ಶಾಸಕರು ಸಿದ್ದರಾಮಯ್ಯನವರೇ ನಮ್ಮ ಮುಖ್ಯಮಂತ್ರಿ ಎಂದು ಹೇಳುತ್ತಾರೆ. ಇತ್ತಎಚ್‌.ಡಿ.ಕುಮಾರಸ್ವಾಮಿ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ’ ಎಂದು ಹೇಳುತ್ತಾರೆ. ಹೀಗಾಗಿ ಈ ಸರ್ಕಾರಕ್ಕೆಬಹುಮತವಿಲ್ಲದ ಕಾರಣನಾವು ಚರ್ಚೆಗೆ ಅವಕಾಶ ನೀಡುವುದಿಲ್ಲ’ ಎಂದು ಹೇಳಿದರು.

ಬಜೆಟ್‌ ಪ್ರತಿ ನೀಡುವಂತೆ ಬಿಎಸ್‌ವೈ ಮನವಿ:ಬಜೆಟ್‌ ಮಂಡಣೆ ಆಗುವವರೆಗೂ ಬಜೆಟ್‌ ಪ್ರತಿಯನ್ನು ಸದನದ ಶಾಸಕರಿಗೆ ಹಾಗೂ ಮಾಧ್ಯಮದವರಿಗೆ ನೀಡದಂತೆ ಸರ್ಕಾರ ಹೊಸ ಪ್ರಯೋಗಕ್ಕೆ ಮುಂದಾಗಿತ್ತು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ವಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ, ‘ಹಿಂದಿನಂತೆ ಬಜೆಟ್‌ ಮಂಡಣೆಗೂ ಮುನ್ನ ಸದನದ ಶಾಸಕರಿಗೂ ಬಜೆಟ್‌ ಪ್ರತಿಗಳನ್ನು ನೀಡುವಂತೆ ಆಗ್ರಹಿಸಿ’ ಸಭಾಧ್ಯಕ್ಷ ಕೆ.ಆರ್‌.ರಮೇಶ್‌ಕುಮಾರ್‌ ಅವರಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ

ಸರ್ಕಾರಕ್ಕೆ ಬಹುಮತ ಇಲ್ಲ ಎಂದು ವಿರೋಧ ಪಕ್ಷದವರು ಅಡ್ಡಿಪಡಿಸಿದ್ದರಿಂದ ವಿಧಾನ ಪರಿಷತ್ ಕಲಾಪವನ್ನು ಸಭಾಪತಿ ಪ್ರತಾಪಚಂದ್ರ ಶೆಟ್ಟಿಯವರು ಮಧ್ಯಾಹ್ನ 12 ಗಂಟೆವರೆಗೆ ಮುಂದೂಡಿದರು.

ಕಲಾಪ ಆರಂಭವಾಗುತ್ತಿದ್ದಂತೆಯೇ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, 'ಆಡಳಿತ ಪಕ್ಷದ ಶಾಸಕರೇ ಸರ್ಕಾರದ ಮೇಲೆ ವಿಶ್ವಾಸ ಹೊಂದಿಲ್ಲ. ಬಹುಮತ ಇಲ್ಲದಿರುವುದರಿಂದ ಮುಖ್ಯಮಂತ್ರಿಯವರು ರಾಜೀನಾಮೆ ನೀಡಬೇಕು' ಎಂದು ಒತ್ತಾಯಿಸಿದರು. 'ರಾಜ್ಯಪಾಲರ ಭಾಷಣವು ಸುಳ್ಳು ಆಶ್ವಾಸನೆಗಳಿಂದ ಕೂಡಿದೆ' ಎಂದು ಆರೋಪಿಸಿದರು.

ಇದಕ್ಕೆ ಎದಿರೇಟು ನೀಡಿದ ಉಪಮುಖ್ಯಮಂತ್ರಿ ಜಿ.ಪರಮೇಶ್ವರ, 'ಸರ್ಕಾರ ಬೀಳಲಿದೆ ಎಂಬುದು ಬರಿ ನಿಮ್ಮ ಕಲ್ಪನೆಯೇ ಅಥವಾ ರಾತ್ರಿ ಏನಾದರೂ ಕನಸು ಬಿದ್ದಿತ್ತಾ' ಎಂದು ಛೇಡಿಸಿದರು.

'ಯಾರೂ ರಾಜೀನಾಮೆ ಕೊಡುವುದಿಲ್ಲ. ಸರ್ಕಾರವನ್ನು ನಡೆಸಲು ಬಿಡಿ. ವೃಥಾ ಸಮಯ ವ್ಯರ್ಥ ಮಾಡಬೇಡಿ. ರಾಜ್ಯದಲ್ಲಿ ಬರಗಾಲ ಇದೆ. ಜನ ಸಾಯುತ್ತಿದ್ದಾರೆ. ಆ ಬಗ್ಗೆ ಚರ್ಚೆ ಮಾಡಿ. ಸದನ ನಡೆಸಲು ಅವಕಾಶ ನೀಡಿ' ಎಂದು ಮನವಿ ಮಾಡಿದರು.

ಅಷ್ಟರಲ್ಲಿ ಬಿಜೆಪಿ ಸದಸ್ಯರು ಎದ್ದು ನಿಂತು ಸರ್ಕಾರದ ವಿರುದ್ಧ ಘೋಷಣೆ ಕೂಗಲಾರಂಭಿಸಿದರು. ಸಭಾಪತಿಯವರ ಪೀಠದ ಎದುರು ಧರಣಿ ಆರಂಭಿಸಿದರು.

ವಿರೋಧ ಪಕ್ಷ ಹಾಗೂ ಆಡಳಿತ ಪಕ್ಷಗಳ ಸದಸ್ಯರು ಪರಸ್ಪರ ಧಿಕ್ಕಾರ ಕೂಗಿದ್ದರಿಂದ ಗದ್ದಲದ ವಾತಾವರಣ ನಿರ್ಮಾಣವಾಯಿತು. ಸಭಾಪತಿಯವರು ಕಲಾಪವನ್ನು ಮಧ್ಯಾಹ್ನ 12ರವರೆಗೆ ಮುಂದೂಡಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಪರಮೇಶ್ವರ್ ಅವರು ಗಹನವಾದ ಚರ್ಚೆಯಲ್ಲಿ ತೊಡಗಿರುವುದು.
ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಪರಮೇಶ್ವರ್ ಅವರು ಗಹನವಾದ ಚರ್ಚೆಯಲ್ಲಿ ತೊಡಗಿರುವುದು.

ಭಿತ್ತಿಪತ್ರ ಪ್ರದರ್ಶನ:ಸಭಾಪತಿಯವರು ಕಲಾಪವನ್ನು ಮುಂದೂಡಿದ ಬಳಿಕ ಬಿಜೆಪಿ ಸದಸ್ಯರು ಸದನದಲ್ಲಿ ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು.

‘ಹಿಂದೂ ವಿರೋಧಿ ಸರ್ಕಾರಕ್ಕೆ ಧಿಕ್ಕಾರ’, ‘ಬಿಜೆಪಿಗೆ ವೋಟು ಹಾಕುವವರು ಮುಸ್ಲೀಮರಲ್ಲ- ಜಮೀರ್’,‘ವರ್ಗಾವಣೆ ದಂಧೆಯಲ್ಲಿ ತೊಡಗಿರೋ ಸರ್ಕಾರ’,‘10% ಸರ್ಕಾರ..... ಪುಟ್ಟರಂಗ ಶೆಟ್ಟಿ’ಎಂಬ ಘೋಷವಾಕ್ಯಗಳಿರುವ ಭಿತ್ತಿ ಪತ್ರಗಳನ್ನು ಬಿಜೆಪಿ ಸದಸ್ಯರು ಪ್ರದರ್ಶಿಸಿದರು.

ಸದನದಲ್ಲಿ ವಿರೋಧ ಪಕ್ಷದ ನಾಯಕ ಬಿ.ಎಸ್‌. ಯಡಿಯೂರಪ್ಪ ಅವರು ಮಾತನಾಡುತ್ತಿರುವುದು.
ಸದನದಲ್ಲಿ ವಿರೋಧ ಪಕ್ಷದ ನಾಯಕ ಬಿ.ಎಸ್‌. ಯಡಿಯೂರಪ್ಪ ಅವರು ಮಾತನಾಡುತ್ತಿರುವುದು.

ಸದನದ ಸುಗಮ‌ ಕಲಾಪಕ್ಕೆ ಅಡ್ಡಿಪಡಿಸಿದರೆ ಬಿಜೆಪಿ ಶಾಸಕರ ಅಮಾನತು ಸಾಧ್ಯತೆ ಇದೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT