ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಮಂಡಲದ ಅಧಿವೇಶನ: ಶಾಸಕರಿಗೆ ಬಜೆಟ್‌ ಕಲಾಪದ ತರಬೇತಿ

Published 5 ಫೆಬ್ರುವರಿ 2024, 23:30 IST
Last Updated 5 ಫೆಬ್ರುವರಿ 2024, 23:30 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ಇದೇ 12 ರಂದು ಆರಂಭವಾಗಲಿದ್ದು, ರಾಜ್ಯಪಾಲರು ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌ ತಿಳಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಇದೇ 16 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ ಮಂಡಿಸಲಿದ್ದಾರೆ ಎಂದರು.

ಅಲ್ಲದೇ, ಇದೇ 9 ರಂದು ಇಂಡಿಯನ್‌ ಇನ್ಸ್‌ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ನಲ್ಲಿ ಶಾಸಕರು ಮತ್ತು ಮಾಧ್ಯಮದವರಿಗೆ ಬಜೆಟ್‌ ಕಲಾಪದ ಕುರಿತು ಒಂದು ದಿನ ಕಾರ್ಯಾಗಾರ ಏರ್ಪಡಿಸಲಾಗಿದೆ. ಶಾಸಕರಿಗೆ ಬಜೆಟ್‌ ಕಲಾ‍ಪದ ಸ್ವರೂಪ, ಚರ್ಚೆಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗುವುದು ಮತ್ತು ಬಜೆಟ್‌ ಕಲಾಪದ ವರದಿಗಾರಿಕೆ ಬಗ್ಗೆಯೂ ಮಾಧ್ಯಮ ಪ್ರತಿನಿಧಿಗಳಿಗೆ ವಿಶೇಷ ತರಬೇತಿ ನೀಡಲಾಗುವುದು. ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು ತರಬೇತಿಯನ್ನು ಉದ್ಘಾಟಿಸಲಿದ್ದಾರೆ ಎಂದು ಅವರು ಹೇಳಿದರು.

ಶಾಸಕರಿಗೆ ನಿತ್ಯ ಭೋಜನ: ಅಧಿವೇಶನದ ಎಲ್ಲ ದಿನಗಳೂ ಬೆಳಿಗ್ಗೆ 8 ರಿಂದ 9 ರವರೆಗೆ ಶಾಸಕರಿಗೆ ಲಘು ಉಪಹಾರ ಮತ್ತು ಮಧ್ಯಾಹ್ನ ಬೆಂಗಳೂರಿನ ವಿವಿಧ ಹೋಟೆಲ್‌ಗಳ ವೈವಿಧ್ಯಮಯ, ರುಚಿಕರ ಭೋಜನ ವ್ಯವಸ್ಥೆ ಮಾಡಲಾಗಿದೆ ಎಂದು ಖಾದರ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT