ಬೆಂಗಳೂರು: ಸರ್ಕಾರಿ ಸ್ವಾಮ್ಯದ ಸಂಸ್ಥೆಯಾದ ಜನತಾ ಬಜಾರ್ ಮೂಲಕ ಅಂಗನವಾಡಿಗಳಿಗೆ ಆಹಾರ ಪದಾರ್ಥಗಳನ್ನು ಪೂರೈಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಒತ್ತಾಯಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ‘ರಾಜ್ಯದ ಅಂಗನವಾಡಿಗಳಿಗೆ ಹಿಂದೆ ಗುಣಮಟ್ಟದ ಆಹಾರ ಪೂರೈಕೆ ಆಗುತ್ತಿತ್ತು. ಈಗ ಪೌಷ್ಟಿಕ ಆಹಾರವೂ ಸರಬರಾಜಾಗುತ್ತಿಲ್ಲ. ವಿತರಿಸುತ್ತಿರುವ ಕಳಪೆ ಆಹಾರವನ್ನು ಕೂಡಲೇ ನಿಲ್ಲಿಸಬೇಕು. ಮೊದಲಿನಂತೆ ಜನತಾ ಬಜಾರ್ ಮೂಲಕ ಗುಣಮಟ್ಟದ ಆಹಾರ ಪದಾರ್ಥಗಳನ್ನು ಪೂರೈಸಬೇಕು ಎಂದು ಕರ್ನಾಟಕ ವಿಧಾನಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯೂ ಶಿಫಾರಸು ಮಾಡಿದೆ’ ಎಂದು ವಿವರಿಸಿದ್ದಾರೆ.

ಅಂಗನವಾಡಿಗಳಿಗೆ ಆಹಾರ ಪದಾರ್ಥ ಸರಬರಾಜು ಮಾಡುತ್ತಿರುವ ಸಂಸ್ಥೆಗೆ ನೀಡಿರುವ ಆದೇಶವನ್ನು ರದ್ದು ಮಾಡಬೇಕು. ರಾಜ್ಯದ ಬಡ ಮಕ್ಕಳ ಆರೋಗ್ಯಪೂರ್ಣ ಬೆಳವಣಿಗೆಯ ದೃಷ್ಟಿಯಿಂದ ಸರ್ಕಾರಿ ಸ್ವಾಮ್ಯದ ಸಂಸ್ಥೆಗೆ ಅವಕಾಶ ನೀಡಬೇಕು. ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.