ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ

Published 15 ಜೂನ್ 2024, 23:30 IST
Last Updated 15 ಜೂನ್ 2024, 23:30 IST
ಅಕ್ಷರ ಗಾತ್ರ

ಬೆಂಗಳೂರು: ಲೋಕಸಭೆಗೆ ಆಯ್ಕೆಯಾದ ಎಚ್‌.ಡಿ. ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಮತ್ತು ಇ. ತುಕಾರಾಂ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ, ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಕ್ಷೇತ್ರಗಳ ಉಪ ಚುನಾವಣೆಗೆ ದಾರಿಯಾಗಿದೆ.

ಕುಮಾರಸ್ವಾಮಿ ಮತ್ತು ಬಸವರಾಜ ಬೊಮ್ಮಾಯಿ ಅವರು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಅವರನ್ನು ಶನಿವಾರ ಭೇಟಿ ಮಾಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಇ. ತುಕಾರಾಂ ಅವರು ವಿಧಾನಸಭಾಧ್ಯಕ್ಷರ ಅನುಮತಿ ಮೇರೆಗೆ ಕಾರ್ಯದರ್ಶಿಗೆ ಶುಕ್ರವಾರವೇ ರಾಜೀನಾಮೆ ಪತ್ರ ಸಲ್ಲಿಸಿದ್ದರು.

ಮೂವರ ರಾಜೀನಾಮೆಯನ್ನು ಸಭಾಧ್ಯಕ್ಷರು ಅಂಗೀಕರಿಸಿದ ಬೆನ್ನಲ್ಲೇ, ವಿಧಾನಸಭೆಯ ಮೂರು ಸ್ಥಾನಗಳು ಖಾಲಿಯಾಗಿವೆ ಎಂದು ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅಧಿಸೂಚನೆ ಹೊರಡಿಸಿದ್ದಾರೆ. ಈ ಅಧಿಸೂಚನೆಯನ್ನು ಚುನಾವಣೆ ಆಯೋಗಕ್ಕೆ ಕಳುಹಿಸಲಾಗಿದೆ. ಆಯೋಗವು ಆರು ತಿಂಗಳ ಒಳಗೆ ಉಪಚುನಾವಣೆಯನ್ನು ನಡೆಸಬೇಕಿದೆ.

ಕೋಟ ರಾಜೀನಾಮೆ: ಉಡುಪಿ– ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಚುನಾಯಿತರಾದ ಕೋಟ ಶ್ರೀನಿವಾಸ ಪೂಜಾರಿ ಅವರು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದರು. ‍ಪೂಜಾರಿ ಪ್ರತಿನಿಧಿಸುತ್ತಿದ್ದ ಪರಿಷತ್ತಿನ ಸ್ಥಳೀಯ ಸಂಸ್ಥೆಗಳ ಕ್ಷೇತ್ರ (ದಕ್ಷಿಣ ಕನ್ನಡ)ಕ್ಕೂ ಚುನಾವಣೆ ನಡೆಯಬೇಕಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT