‘ಕಳೆದ ಐದು ವರ್ಷಗಳಿಂದ ರಾಮನಗರದಲ್ಲಿ ನಾನು ಧ್ವಜಾರೋಹಣ ಮಾಡಿದ್ದೇನೆ. ಚನ್ನಪಟ್ಟಣದ ಬಗ್ಗೆ ಅಧಿಕಾರಿಗಳ ಬಳಿ ಕೇಳಿದಾಗ, ಆರು ವರ್ಷಗಳಿಂದ ಅಲ್ಲಿಗೆ ಬಂದು ಯಾರೂ ಧ್ವಜಾರೋಹಣ ನಡೆಸಿಲ್ಲ ಎಂದರು. ಅವರಿಗೆ ದೇಶದ ಮೇಲೆ ವಿಶ್ವಾಸವಿಲ್ಲ ಎಂದೆನಿಸುತ್ತದೆ. ಅವರು ಏನಾದರು ಮಾಡಿಕೊಳ್ಳಲಿ, ನಾನು ನನ್ನ ಕರ್ತವ್ಯ ಮಾಡಿದ್ದೇನೆ’ ಎಂದು ಪರೋಕ್ಷವಾಗಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು.