ಬೆಂಗಳೂರು: ‘ಒಳಮೀಸಲಾತಿಯನ್ನು ಪರಿಗಣಿಸಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳನ್ನು ಭರ್ತಿ ಮಾಡಬೇಕು. ಇಲ್ಲವಾದರೆ ಪಕ್ಷದ ವತಿಯಿಂದ ಹೋರಾಟ ಅನಿವಾರ್ಯವಾಗುತ್ತದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ‘ಮೀಸಲಾತಿ ಪ್ರಮಾಣವನ್ನು ಸರ್ಕಾರ ಶೇ 50ರಿಂದ ಶೇ 56ಕ್ಕೆ ಏರಿಸಿದೆ. ಈಗ 50 ಸಾವಿರ ಹುದ್ದೆ ತುಂಬುತ್ತೀರೋ ಇಲ್ಲ 1 ಲಕ್ಷ ಹುದ್ದೆ ಭರ್ತಿ ಮಾಡುತ್ತೀರೋ ಎಂಬುದು ನಿಮಗೆ ಬಿಟ್ಟಿದ್ದು. ಎಲ್ಲ ಖಾಲಿ ಹುದ್ದೆಗಳನ್ನೂ ಮಾಡಿ ಎನ್ನುವ ಆಗ್ರಹ ನಮ್ಮದು’ ಎಂದು ಹೇಳಿದರು.

‘ಪ್ರಕರಣ ನ್ಯಾಯಾಲಯದಲ್ಲಿದೆ ಎಂಬ ಕುಂಟು ನೆಪ ಹೇಳದೇ ಯಾವುದೇ ಸಮುದಾಯಕ್ಕೂ ಅನ್ಯಾಯ ಆಗದಂತೆ ಉದ್ಯೋಗ ನೀಡಬೇಕು. ಮುಖ್ಯಮಂತ್ರಿಯವರು ಒಂದು ಕಡೆ ತೊಟ್ಟಿಲು ತೂಗಿ ಮತ್ತೊಂದು ಕಡೆ ಮಗುವನ್ನು ಚಿವುಟುವ ಕೆಲಸ ಮಾಡುತ್ತಿದ್ದಾರೆ. ಇದು ಅಕ್ಷಮ್ಯ ಅಪರಾಧ. ಹಳೆಯ ಮೀಸಲಾತಿ ಪ್ರಮಾಣದಲ್ಲಿ ನೇಮಕಾತಿ ಮಾಡಲು ಮುಂದಾಗಿರುವ ಸರ್ಕಾರ ರಾಜ್ಯದಲ್ಲಿ ಬೆಂಕಿ ಹಚ್ಚಲು ಹೊರಟಂತಿದೆ’ ಎಂದು ವಿಜಯೇಂದ್ರ ಟೀಕಿಸಿದರು.

‘ನೀವು ಎಷ್ಟು ದಿನ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತಿರುತ್ತೀರಿ ಎಂಬುದು ನಮಗೆ ಗೊತ್ತಿಲ್ಲ. ಆದರೆ, ಅಹಿಂದ ಸಮುದಾಯದ ಹೆಸರು ಹೇಳಿ ಅಧಿಕಾರ ಹಿಡಿದ ನೀವು ಆ ಸಮುದಾಯದ ತಾಳ್ಮೆ ಪರೀಕ್ಷೆ ಮಾಡಬೇಡಿ. ಶೋಷಿತ–ಪೀಡಿತ ಸಮುದಾಯಗಳನ್ನು ಕೆಣಕಬೇಡಿ. ಒಳಮೀಸಲಾತಿ ಜಾರಿ ಮಾಡದೇ ಖಾಲಿ ಹುದ್ದೆ ಭರ್ತಿ ಮಾಡುವ ಕೆಲಸ ಮಾಡಿದರೆ, ರಾಜ್ಯದಲ್ಲಿ ಮುಂದೆ ಆಗುವ ಘಟನೆಗಳಿಗೆ ನೀವೇ ಹೊಣೆಯಾಗಬೇಕಾಗುತ್ತದೆ’ ಎಂದೂ ಎಚ್ಚರಿಸಿದರು.

‘ಇದೇ 6ರಿಂದ ಬಜೆಟ್ ಅಧಿವೇಶನ ಆರಂಭ ಆಗುತ್ತಿದೆ. ಸರಣಿ ಪ್ರತಿಭಟನೆಗಳು ಬೆಂಗಳೂರಿನಲ್ಲಿ ಆರಂಭ ಆಗಲಿವೆ. ನುಡಿದಂತೆ ನಡೆದ ಸರ್ಕಾರ ಎಂದು ಹೇಳಿಕೊಳ್ಳುವ ನೀವು ಯಾವುದೇ ಭರವಸೆಯನ್ನೂ ಈಡೇರಿಸಿಲ್ಲ. ಅಂಗನವಾಡಿ, ಆಶಾ ಕಾರ್ಯಕರ್ತೆಯರು ಹೋರಾಟ ಪ್ರಾರಂಭಿಸಲಿದ್ದಾರೆ. ಅತಿಥಿ ಉಪನ್ಯಾಸಕರ ಆಶ್ವಾಸನೆಯನ್ನೂ ಸರ್ಕಾರ ಈಡೇರಿಸಿಲ್ಲ. ಅವರೂ ಬೀದಿಗಿಳಿದು ಹೋರಾಟ ಮಾಡುವ ಸಂದರ್ಭ ಸೃಷ್ಟಿಯಾಗಿದೆ’ ಎಂದು ಹೇಳಿದರು.

ಸಾರಿಗೆ ಸಂಸ್ಥೆಗಳ ನೌಕರರು, ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುವ ವೈದ್ಯರು ಬೀದಿಗಿಳಿದು ಹೋರಾಟ ಮಾಡುವ ಪರಿಸ್ಥಿತಿಗೆ ಬಂದು ತಲುಪಿದ್ದಾರೆ. 108 ಆಂಬುಲೆನ್ಸ್ ಕೆಟ್ಟು ನಿಂತಿದ್ದು, ನೌಕರರಿಗೆ ಸಂಬಳ ಕೊಟ್ಟಿಲ್ಲ. ಅಲ್ಲದೆ, ಗುತ್ತಿಗೆದಾರರ ಬಿಲ್ ಬಾಕಿ ಸುಮಾರು ₹45 ಸಾವಿರ ಕೋಟಿಗೆ ತಲುಪಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಬಿ.ಶ್ರೀರಾಮುಲು, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಹರತಾಳು ಹಾಲಪ್ಪ, ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ್ ಇದ್ದರು.

ದಪ್ಪ ಚರ್ಮದ ಸರ್ಕಾರಕ್ಕೆ ಯುವಕರು ಪ್ರತಿಭಟನೆ ನಡೆಸಿ ಬಾರುಕೋಲಿನಿಂದ ಹೊಡೆದ ಮೇಲೆ ಐವತ್ತು ಸಾವಿರ ಹುದ್ದೆ ಭರ್ತಿಗೆ ಮುಂದಾಗಿದೆ.
-ಬಿ.ಶ್ರೀರಾಮುಲು, ಮಾಜಿ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.