ಬೆಂಗಳೂರು:‘ದಕ್ಷಿಣ ಕನ್ನಡ ಜಿಲ್ಲೆಯ ಪಾಣೆ ಮಂಗಳೂರಿನಲ್ಲಿ ಪೊಲೀಸರು ನಿಗದಿತ ಸಮಯಕ್ಕೆ ಮುನ್ನವೇ ಯಕ್ಷಗಾನ ಪ್ರದರ್ಶನವನ್ನು ನಿಲ್ಲಿಸುವ ಮೂಲಕ ಹಿಂದೂ ಧಾರ್ಮಿಕ ಶ್ರದ್ಧೆ ಮತ್ತು ಸಂಸ್ಕೃತಿಯ ಮೇಲೆ ದೌರ್ಜನ್ಯ ನಡೆಸಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಸಂಪೂರ್ಣ ದಿಕ್ಕು ತಪ್ಪುತ್ತಿದೆ. ಹಿಂದೂ ಉತ್ಸವಗಳು, ಧಾರ್ಮಿಕ ಆಚರಣೆಗಳನ್ನು ಅಪಮಾನಿಸುವ ಪ್ರಕರಣಗಳು ಮೇಲಿಂದ ಮೇಲೆ ನಡೆಯುತ್ತಿದೆ’ ಎಂದು ಅವರು ‘ಎಕ್ಸ್’ ಮೂಲಕ ಕಿಡಿಕಾರಿದ್ದಾರೆ.

‘ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡ ದೇವತೆ ಚಾಮುಂಡೇಶ್ವರಿ ದೇವಸ್ಥಾನವು ಹಿಂದೂಗಳಿಗೆ ಸೇರಿದ್ದಲ್ಲ ಎಂದು ಉಪಮುಖ್ಯಮಂತ್ರಿ ಹೇಳಿದ್ದಾರೆ. ಆದರೆ, ಮೈಸೂರಿನ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಉದ್ಯಮಿ ದಂಪತಿ ರೀಲ್ಸ್ ಮಾಡಲು ಅವಕಾಶ ನೀಡಿ ಸಾಂಸ್ಕೃತಿಕ ನಗರಿಯ ಘನತೆಯನ್ನು ಕುಗ್ಗಿಸಲಾಗಿದೆ’ ಎಂದು ಅವರು ಹೇಳಿದ್ದಾರೆ.

‘ಹಿಂದೂ ಧಾರ್ಮಿಕ ಶ್ರದ್ಧೆ ಹಾಗೂ ನಾಡಿನ ಸಂಸ್ಕೃತಿಯನ್ನು ಅವಮಾನಿಸುವುದು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಒಂದು ಭಾಗವಾಗಿದೆ. ಗಣೇಶೋತ್ಸವದ ಸಾಂಪ್ರದಾಯಿಕ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹೆಚ್ಚುವರಿ ಅವಧಿಯನ್ನು ವಿಸ್ತರಿಸಬೇಕು ಎಂದು ಕಳೆದ ವಿಧಾನಸಭಾ ಅಧಿವೇಶನದಲ್ಲಿಯೇ ಚರ್ಚೆಯಾಗಿ, ಸರ್ಕಾರ ಸಮ್ಮತಿಯನ್ನೂ ವ್ಯಕ್ತಪಡಿಸಿದೆ. ಆದರೂ ಪೊಲೀಸರು ಗಣೇಶೋತ್ಸವದ ಮೇಲೆ ಕೆಂಗಣ್ಣು ಬೀರುತ್ತಿರುವುದು ಏಕೆ’ ಎಂದು ಪ್ರಶ್ನಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.