ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನ ಪರಿಷತ್‌ನ ಮೂರು ಸ್ಥಾನಗಳಿಗೆ ಉಪ ಚುನಾವಣೆ; ಜೂನ್ 30ರಂದು ಮತದಾನ

Published 6 ಜೂನ್ 2023, 14:38 IST
Last Updated 6 ಜೂನ್ 2023, 14:38 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್‌ನಲ್ಲಿ ಸದಸ್ಯರ ರಾಜೀನಾಮೆಯಿಂದ ತೆರವಾಗಿರುವ ಮೂರು ಸ್ಥಾನಗಳ ಆಯ್ಕೆಗೆ, ಚುನಾವಣಾ ಆಯೋಗವು ಉಪ ಚುನಾವಣೆ ದಿನಾಂಕ ಪ್ರಕಟಿಸಿದೆ.

ಬಾಬೂರಾವ್ ಚಿಂಚನಸೂರ, ಆರ್.ಶಂಕರ್‌ ಹಾಗೂ ಲಕ್ಷ್ಮಣ ಸವದಿ ಅವರು ಈ ಬಾರಿಯ ವಿಧಾನಸಭೆ ಚುನಾವಣೆಗೂ ಮುನ್ನ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರು. ಹೀಗಾಗಿ ತೆರವಾಗಿರುವ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಪರಿಷತ್‌ ಸದಸ್ಯರನ್ನು ವಿಧಾನಸಭೆ ಸದಸ್ಯರೇ ಮತದಾನದ ಮೂಲಕ ಆಯ್ಕೆ ಮಾಡಲಿದ್ದಾರೆ.

ಚಿಂಚನಸೂರ ಅವರ ಅವಧಿ 2024ರ ಜೂನ್‌ 17ರ ವರೆಗೆ, ಶಂಕರ್‌ ಅವರ ಅವಧಿ 2026ರ ಜೂನ್‌ 30ರ ವರೆಗೆ ಮತ್ತು ಸವದಿ ಅವರ ಅವಧಿ 2028ರ ಜೂನ್‌ 14ರ ವರೆಗೆ ಇತ್ತು.

ಜೂನ್‌ 13ರಿಂದ 20ರ ವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. 21ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, 22ರಂದು ಹಿಂಪಡೆಯಬಹುದಾಗಿದೆ. 30ರಂದು ಮತದಾನ ನಡೆಯಲಿದ್ದು, ಅದೇ ದಿನ ಫಲಿತಾಂಶ ಪ್ರಕಟವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT