ಗದಗ: ‘ಕಾಂಗ್ರೆಸ್ ನಾಯಕರು ಸಿದ್ದರಾಮೋತ್ಸವ ಮಾಡಿ ಸಂತಸಪಟ್ಟಿರಬಹುದು. ಆದರೆ, ಅದರಿಂದ ಬಿಜೆಪಿ ಮೇಲೇನೂ ಪರಿಣಾಮ ಬೀರದು. ಸಿದ್ದರಾಮೋತ್ಸವ ಸ್ಟಿರಾಯ್ಡ್ ಇದ್ದಂತೆ. ಬಹಳ ಕಾಲ ಪರಿಣಾಮ ಬೀರುವುದಿಲ್ಲ’ ಎಂದು ಸಚಿವ ಸಿ.ಸಿ.ಪಾಟೀಲ ಹೇಳಿದರು.

ನಗರದಲ್ಲಿ ಭಾನುವಾರ ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದ ಅವರು, ‘ಕಾಂಗ್ರೆಸ್ ಮಾದರಿಯ ಸಮಾವೇಶಗಳನ್ನು ನಾವು ದಿನಕ್ಕೊಂದು ಮಾಡುತ್ತೇವೆ. ವಿರೋಧ ಪಕ್ಷದವರಿಗೆ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಇಂತಹ ಸಮಾವೇಶಗಳು ಅನಿವಾರ್ಯ’ ಎಂದು ಹೇಳಿದರು.

ರಾಜ್ಯದಲ್ಲಿ ಈ ವರ್ಷ ಸಾಕಷ್ಟು ಮಳೆಯಾಗಿದ್ದು, ಹಲವೆಡೆ ತೀವ್ರತರ ಹಾನಿಯಾಗಿದೆ. ಮುಖ್ಯಮಂತ್ರಿ ಬೊಮ್ಮಾಯಿ ಅವರು ವರಿಗೆ ಕೋವಿಡ್–19 ಪಾಸಿಟಿವ್ ಇದ್ದರೂ ವಿಡಿಯೊ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಮಧ್ಯಂತರ ಪರಿಹಾರ ಬಿಡುಗಡೆ ಮಾಡಿದ್ದಾರೆ’ ಎಂದು ತಿಳಿಸಿದರು.

‘ಗದಗ ನಗರದಲ್ಲಿ ಹಾನಿಯಾಗಿರುವ ರಸ್ತೆ ದುರಸ್ತಿಗೆ ಅನುದಾನ ಬಿಡುಗಡೆ ಮಾಡಲಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಪ್ರಾರಂಭಗೊಳ್ಳಲಿದೆ. ಜಿಲ್ಲೆಗೆ ₹5 ಕೋಟಿ ಬೆಳೆ ಪರಿಹಾರ ಮಂಜೂರಾಗಿದೆ. ಅಧಿಕಾರಿಗಳು ನಿಖರ ಸಮೀಕ್ಷೆ ನಡೆಸಿ, ಅರ್ಹರಿಗೆ ಪರಿಹಾರ ಒದಗಿಸುವಂತೆ ಸೂಚಿಸಲಾಗಿದೆ’ ಎಂದು ಹೇಳಿದರು.

ಯುವ ನಾಯಕ ಅನಿಲ ಮೆಣಸಿನಕಾಯಿ, ನಗರಸಭೆ ಅಧ್ಯಕ್ಷೆ ಉಷಾ ದಾಸರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿದ್ದು ಪಲ್ಲೇದ, ನಗರಸಭಾ ಸದಸ್ಯ ರಾಘವೇಂದ್ರ ಯಳವತ್ತು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.