ಬೆಂಗಳೂರು: ರಾಯಚೂರು ತಾಲ್ಲೂಕಿನಲ್ಲಿ ₹24.50 ಕೋಟಿ ವೆಚ್ಚದ ನೂತನ ಜವಳಿ ಪಾರ್ಕ್, ಹಾನಗಲ್ ತಾಲ್ಲೂಕು ಯಳವಟ್ಟಿಯಲ್ಲಿ ₹35.07 ಕೋಟಿ ವೆಚ್ಚದಲ್ಲಿ ತೋಟಗಾರಿಕಾ ಬೆಳೆಗಳ ಸಂಸ್ಕರಣಾ ಘಟಕ(ಫುಡ್ ಪಾರ್ಕ್) ಮತ್ತು ಕೊಪ್ಪಳ ಜಿಲ್ಲೆ ಕನಕಗಿರಿ ತಾಲ್ಲೂಕಿನ ಸಿರಿವಾರ ಗ್ರಾಮದಲ್ಲಿ ₹83.79 ಕೋಟಿ ವೆಚ್ಚದಲ್ಲಿ ತೋಟಗಾರಿಕೆ ತಂತ್ರಜ್ಞಾನ ಪಾರ್ಕ್ ಸ್ಥಾಪಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಕಾನೂನು ಸಚಿವ ಎಚ್.ಕೆ.ಪಾಟೀಲ ಅವರು ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದರು.

ರಾಯಚೂರಿನಲ್ಲಿ ಜವಳಿ ಪಾರ್ಕ್ ಅನ್ನು ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು. ಯಳವಟ್ಟಿ ಗ್ರಾಮದಲ್ಲಿ 28.3 ಎಕರೆ ಪ್ರದೇಶದಲ್ಲಿ ಮಾವು ಮತ್ತು ಇತರೆ ತೋಟಗಾರಿಕೆ ಬೆಳೆಗಳ ಬಹು ಉತ್ಪನ್ನಗಳ ನಿರ್ವಹಣೆ, ಸಂಗ್ರಹಣೆ, ಸಂಸ್ಕರಣೆ ಮತ್ತು ಸಂರಕ್ಷಣಾ ಘಟಕಗಳುಳ್ಳ ಫುಡ್ ಪಾರ್ಕ್ ಅನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಸ್ಥಾಪಿಸಲಾಗುವುದು. ಸಿರಿವಾರ ಪರಂಪೋಕದ ಸರ್ಕಾರಿ ಜಮೀನಿನಲ್ಲಿ ತೋಟಗಾರಿಕೆ ತಂತ್ರಜ್ಞಾನ ಪಾರ್ಕ್ ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲಾಗುವುದು ಎಂದು ಪಾಟೀಲ ಹೇಳಿದರು.

ಪ್ರಮುಖ ತೀರ್ಮಾನಗಳು:

*ಮೈಸೂರು ವಿಶ್ವವಿದ್ಯಾಲಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನ ಪೀಠವನ್ನು ಸ್ಥಾಪಿಸಲು ₹10 ಕೋಟಿ ಅನುದಾನ

*ಆಯುಷ್ ಇಲಾಖೆಯ ಆಯುರ್ವೇದ, ಸಿದ್ಧ ಮತ್ತು ಯುನಾನಿ ಔಷಧಗಳ ಅಮಲುಜಾರಿ ವಿಭಾಗ ಮತ್ತು ಪರೀಕ್ಷಾ ಪ್ರಯೋಗಾಲಯವನ್ನು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯಲ್ಲಿ ವಿಲೀನ

*ಚಿಕ್ಕಬಳ್ಳಾಪುರ ತಾಲ್ಲೂಕು ಯರಮಾರೇನಹಳ್ಳಿ ಗ್ರಾಮದ 5 ಎಕರೆ 23 ಗುಂಟೆ ಸರ್ಕಾರಿ ಬೀಳು ಜಮೀನನ್ನು ಅಕ್ಷಯಪಾತ್ರೆ ಅಡುಗೆ ಮನೆ ಮತ್ತು ಹಿಂದುಳಿದ ಗ್ರಾಮೀಣ ಮಕ್ಕಳ ಶಾಲಾ ಕಟ್ಟಡ ನಿರ್ಮಾಣಕ್ಕಾಗಿ ಇಸ್ಕಾನ್ಗೆ ಮಂಜೂರು

*ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವತಿಯಿಂದ ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಳವಡಿಸಲಾಗಿರುವ ಸಮರ್ಪಕ ಕಾರ್ಯನಿರ್ವಹಿಸದ 1,530 ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರಗಳ ಉಪಕರಣಗಳನ್ನು ತೆಗೆದು ₹19.89 ಕೋಟಿ ವೆಚ್ಚದಲ್ಲಿ ಹೊಸದಾಗಿ ಅಳವಡಿಸಲು ಒಪ್ಪಿಗೆ

* ಅಂತರ್ಜಲ ಬಳಕೆಗೆ ನಿರಾಕ್ಷೇಪಣಾ ನೀಡುವ ಸಂಬಂಧ ಕೇಂದ್ರೀಯ ಅಂತರ್ಜಲ ಪ್ರಾಧಿಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ಸೂಕ್ತ ಮಾರ್ಪಾಡಿನೊಂದಿಗೆ ರಾಜ್ಯದಲ್ಲಿ ಜಾರಿಗೊಳಿಸಲು ತೀರ್ಮಾನ

*ದ.ಕ ಜಿಲ್ಲೆ ಉಳ್ಳಾಲದಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿನಿಯರಿಗಾಗಿ ₹17.09 ಕೋಟಿ ವೆಚ್ಚದಲ್ಲಿ ವಸತಿ ಸಹಿತ ಪದವಿಪೂರ್ವ ಕಾಲೇಜು ನಿರ್ಮಾಣಕ್ಕೆ ಒಪ್ಪಿಗೆ

* ಕಿತ್ತೂರು ತಾಲ್ಲೂಕಿನ ಕಿತ್ತೂರು ಕೋಟೆ ಆವರಣದಲ್ಲಿ ₹30 ಕೋಟಿ ವೆಚ್ಚದಲ್ಲಿ ಥೀಮ್ ಪಾರ್ಕ್ ನಿರ್ಮಾಣ ಕಾಮಗಾರಿಗೆ ಅನುಮೋದನೆ.

*ಹಾರಂಗಿ ಜಲಾಶಯದ ಕೆಳಭಾಗ ಹುಲುಗುಂದ ಗ್ರಾಮದ ಬಳಿ ₹36.50 ಕೋಟಿ ವೆಚ್ಚದಲ್ಲಿ ಕಮಾನು ಸೇತುವೆ ನಿರ್ಮಿಸಲು ಒಪ್ಪಿಗೆ

*ಹೇಮಾವತಿ ಯೋಜನೆಯಡಿ ನಾಗಮಂಗಲ ಶಾಖಾ ನಾಲೆಯ ಸರಪಳಿಯನ್ನು 0.00 ಕಿ.ಮೀ.ನಿಂದ 78.46 ಕಿ.ಮೀ.ವರೆಗೆ ₹560 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಅನುಮೋದನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.