ಮಂಗಳವಾರ, 5 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

KPSC: ಕೆಪಿಎಸ್‌ಸಿ ಅಧ್ಯಕ್ಷರು, ಸದಸ್ಯರ ಪಿಂಚಣಿ ಹೆಚ್ಚಳಕ್ಕೆ ಅಸ್ತು

Published 23 ಸೆಪ್ಟೆಂಬರ್ 2023, 23:59 IST
Last Updated 23 ಸೆಪ್ಟೆಂಬರ್ 2023, 23:59 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಧ್ಯಕ್ಷರು ಮತ್ತು ಸದಸ್ಯರ ಪಿಂಚಣಿಯನ್ನು ಎರಡು ಪಟ್ಟಿಗಿಂತಲೂ ಹೆಚ್ಚು ಮೊತ್ತದಷ್ಟು ಏರಿಕೆ ಮಾಡುವ ಪ್ರಸ್ತಾವಕ್ಕೆ ಶುಕ್ರವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಕೆಪಿಎಸ್‌ಸಿ ಅಧ್ಯಕ್ಷರು, ಸದಸ್ಯರ ಪಿಂಚಣಿ ಹೆಚ್ಚಳಕ್ಕೆ ಅವಕಾಶ ಕಲ್ಪಿಸುವ ‘ಕರ್ನಾಟಕ ಲೋಕಸೇವಾ ಆಯೋಗ (ಸೇವಾ ಷರತ್ತುಗಳು) (ತಿದ್ದುಪಡಿ) ನಿಯಮಗಳು–2023’ಕ್ಕೆ ಸಚಿವ ಸಂಪುಟವು ಅನುಮೋದನೆ ನೀಡಿದೆ. ಆಯೋಗದ ಅಧ್ಯಕ್ಷರು ಅಥವಾ ಸದಸ್ಯರಾಗಿ ಆರು ವರ್ಷಗಳ ಪೂರ್ಣಾವಧಿಯವರೆಗೆ ಕಾರ್ಯನಿರ್ವಹಿಸಿದವರಿಗೆ ಪಿಂಚಣಿ ಹೆಚ್ಚಳಕ್ಕೆ ತಿದ್ದುಪಡಿ ನಿಯಮಗಳಲ್ಲಿ ಅವಕಾಶ ಕಲ್ಪಿಸಲಾಗಿದೆ.

ಕೆಪಿಎಸ್‌ಸಿ ಅಧ್ಯಕ್ಷರಾಗಿ ನಿವೃತ್ತರಾದವರಿಗೆ ಈಗ ತಿಂಗಳಿಗೆ ₹ 29,640 ಪಿಂಚಣಿ ನೀಡಲಾಗುತ್ತದೆ. ಅದನ್ನು ತಿಂಗಳಿಗೆ ₹ 67,500ಕ್ಕೆ ಹೆಚ್ಚಳ ಮಾಡಲಾಗಿದೆ. ಕೆಪಿಎಸ್‌ಸಿ ಸದಸ್ಯರಾಗಿ ನಿವೃತ್ತರಾದವರಿಗೆ ತಿಂಗಳಿಗೆ ₹ 24,960 ಪಿಂಚಣಿ ನೀಡಲಾಗುತ್ತಿದೆ. ಅದನ್ನು ತಿಂಗಳಿಗೆ ₹ 61,500ಕ್ಕೆ ಹೆಚ್ಚಳ ಮಾಡಲು ನಿಯಮಗಳಿಗೆ ತಿದ್ದುಪಡಿ ತರಲು ಒಪ್ಪಿಗೆ ನೀಡಲಾಗಿದೆ.

ಇನ್ನು ಮುಂದೆ ಕೆಪಿಎಸ್‌ಸಿ ಅಧ್ಯಕ್ಷರು, ಸದಸ್ಯರಾಗುವವರಿಗೆ ಹೊಸ ಪಿಂಚಣಿ ಯೋಜನೆಯ ಅಡಿಯಲ್ಲಿ ಪಿಂಚಣಿ ಪಾವತಿಸುವ ಕುರಿತು ಪರಿಗಣಿಸಲು ಸಂಪುಟ ಸಭೆ ನಿರ್ಧರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT