ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿದ ಸಾಮಾಜಿಕ ಮತ್ತು ಶೈಕ್ಷಣಿಕ ವರದಿಯ ಕುರಿತು ಗುರುವಾರ ನಡೆದ ಸಚಿವ ಸಂಪುಟದ ವಿಶೇಷ ಸಭೆಯಲ್ಲಿ ಸಚಿವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಚರ್ಚೆ ಅಪೂರ್ಣವಾಗಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ಮತ್ತೆ ಚರ್ಚೆ ಆಗಲಿದೆ ಎಂದು ಸಚಿವರು ಹೇಳಿದ್ದಾರೆ.

ಸಚಿವ ಸಂಪುಟ ಸಭೆ ಮುಗಿದ ಬಳಿಕ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ‘ಜಾತಿ ಗಣತಿ ವರದಿ ಬಗ್ಗೆ ಸಂಪುಟ ಸಭೆಯಲ್ಲಿ ಯಾವುದೇ ತೀರ್ಮಾನ ಆಗಿಲ್ಲ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಆಗಲಿದೆ. ಏನು ತೀರ್ಮಾನ ಆಗುತ್ತೊ’ ಎಂದರು.

‘ಸಭೆಯಲ್ಲಿ ಸಚಿವರು ಅವರವರ ಅಭಿಪ್ರಾಯವನ್ನು ಹೇಳಿದ್ದಾರೆ. ವರದಿಯನ್ನು ಯಾರೂ ವಿರೋಧಿಸಿಲ್ಲ’ ಎಂದು ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

‘ಸಭೆಯಲ್ಲಿ ಚರ್ಚೆ ನಡೆದಿದೆ. ನಾನು ನನ್ನ ಅಭಿಪ್ರಾಯವನ್ನು ಇನ್ನಷ್ಟೆ ವ್ಯಕ್ತಪಡಿಸಬೇಕಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮುಂದುವರಿಯಲಿದೆ’ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದರು.

‘ಚರ್ಚೆ ಅಪೂರ್ಣವಾಗಿದೆ. ಮತ್ತೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮುಂದುವರಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು. ಎಲ್ಲ ಸಚಿವರು ತಮ್ಮಲ್ಲಿರುವ ಸಂಶಯಗಳ ಬಗ್ಗೆ ಮಾಹಿತಿ ಕೇಳಿದ್ದಾರೆ. ಮುಂದಿನ ಸಭೆಯಲ್ಲಿ ವಿಸ್ಕೃತ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಸಹಕಾರ ಸಚಿವ ಎಂದು ಕೆ.ಎನ್. ರಾಜಣ್ಣ ಹೇಳಿದರು.

‘ಈ ವರದಿಯ ವಿರೋಧ, ಪರ ಎಂದು ಇಲ್ಲ. ವೈಯಕ್ತಿಕವಾಗಿ ಸಚಿವರು ಅಭಿಪ್ರಾಯ ಹೇಳಿದ್ದಾರೆ. ಸಚಿವರು ಇನ್ನಷ್ಟು ಮಾಹಿತಿ ಕೇಳಿದ್ದಾರೆ. ಏನೇನು ಬೇಕು ಅದೆಲ್ಲವನ್ನೂ ಕೊಡಲಿದ್ದಾರೆ. ವರದಿ ಒಪ್ಪ ಬಾರದು ಎಂಬ ಪ್ರಶ್ನೆ ಬಂದಿಲ್ಲ’ ಎಂದು ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಹೇಳಿದರು.

‘ವರದಿಯ ಬಗ್ಗೆ ಬಹಳ ವಿವರವಾಗಿ ಚರ್ಚೆ ಮಾಡಿದ್ದೇವೆ. ಚರ್ಚೆ ಅಪೂರ್ಣವಾಗಿದೆ. ಇನ್ನೊಂದು ಸಚಿವ ಸಂಪುಟದಲ್ಲಿ ಚರ್ಚೆ ಮಾಡುತ್ತೇವೆ. ಸಚಿವ ಸಂಪುಟದ ಅಭಿಪ್ರಾಯವನ್ನು ಬಹಿರಂಗವಾಗಿ ಹೇಳಲು ಹೋಗುವುದಿಲ್ಲ’ ಎಂದೂ ಹೇಳಿದರು.

‘ರಾಜ್ಯದಲ್ಲಿರುವ ಎಲ್ಲ ಜನಾಂಗಗಳ, ಬಡವರ ಉದ್ದೇಶದಿಂದ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ನಡೆಸಲಾಗಿದೆ. ಯಾವ ಸಮಾಜಕ್ಕೂ ಅನ್ಯಾಯ ಆಗಬಾರದು. ದಲಿತರಿಂದ ಹಿಡಿದು ಮುಂದುವರಿದ, ಹಿಂದುಳಿದ ವರ್ಗಗಳಿಗೆ ಅನ್ಯಾಯ ಆಗಬಾರದು. ನಾವು ಈ ರಾಜ್ಯದ ಎಲ್ಲ ಜನರ ಪರವಾಗಿ, ನಮ್ಮ ಸಮಾಜದ ಪರವಾಗಿ ಇರುತ್ತೇವೆ’ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.

‘ಚರ್ಚೆ ಅಪೂರ್ಣವಾಗಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮತ್ತೆ ಚರ್ಚೆ ಮಾಡುತ್ತೇವೆ. ಸಾಮಾಜಿಕ ನ್ಯಾಯದ ವಿಷಯದಲ್ಲಿ ಯಾರ ವಿರೋಧವೂ ಇಲ್ಲ. ಯಾವ ವರ್ಗಕ್ಕೂ ಅನ್ಯಾಯ ಆಗುವುದಿಲ್ಲ’ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.