ಸೋಮವಾರ, 3 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಲಕರು, ಕ್ಲೀನರ್‌ಗಳಿಗೆ ಪರಿಹಾರ ಯೋಜನೆ; ಸಚಿವ ಎಚ್‌.ಕೆ.ಪಾಟೀಲ

Published 18 ಜನವರಿ 2024, 21:16 IST
Last Updated 18 ಜನವರಿ 2024, 21:16 IST
ಅಕ್ಷರ ಗಾತ್ರ

ಬೆಂಗಳೂರು: ಖಾಸಗಿ ವಾಹನಗಳ ಚಾಲಕರು, ನಿರ್ವಾಹಕರು ಮತ್ತು ಕ್ಲೀನರ್‌ಗಳ ಸಾಮಾಜಿಕ ಭದ್ರತೆಗಾಗಿ ರೂಪಿಸಿರುವ ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ‘ಕಾರ್ಮಿಕರ ಸಾಮಾಜಿಕ ಭದ್ರತಾ ಮತ್ತು ಕಲ್ಯಾಣ ಸುಂಕ ಮಸೂದೆ’ಗೆ ಸಂಪುಟ ಒಪ್ಪಿಗೆ ನೀಡಿದೆ ಎಂದು ಸಚಿವ ಎಚ್‌.ಕೆ.ಪಾಟೀಲ ತಿಳಿಸಿದರು.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಸಂಘಟಿತ ಕಾರ್ಮಿಕರಲ್ಲಿ ಮುಖ್ಯವಾಗಿ ಖಾಸಗಿ ವಾಣಿಜ್ಯ ಸಾರಿಗೆ ವಾಹನಗಳಾದ ಆಟೋ, ಟ್ಯಾಕ್ಸಿ, ಮ್ಯಾಕ್ಸಿಕ್ಯಾಬ್‌, ಲಾರಿ, ಬಸ್‌ ಇತ್ಯಾದಿ ವಾಹನಗಳ ಕಾರ್ಮಿಕರು ಅಪಘಾತದ ಸಂದರ್ಭದಲ್ಲಿ ಮೃತ ಪಟ್ಟರೆ ಅಥವಾ ಅಂಗವೈಕಲ್ಯಕ್ಕೆ ತುತ್ತಾದರೆ ಅವರ ಕುಟುಂಬಗಳಿಗೆ ಪರಿಹಾರ ಮತ್ತು ಅವರ ಮಕ್ಕಳಿಗೆ ಶೈಕ್ಷಣಿಕ ಧನ ಸಹಾಯ ನೀಡಲಾಗುತ್ತದೆ ಎಂದರು.

ನಿಧಿ ಸಂಗ್ರಹಣೆ, ನಿರ್ವಹಣೆ ಮತ್ತು ಫಲಾನುಭವಿಗಳಿಗೆ ಸಾಮಾಜಿಕ ಭದ್ರತಾ ಸೌಲಭ್ಯಗಳ ವಿತರಣೆಗೆ ಕರ್ನಾಟಕ ಮೋಟಾರು ಸಾರಿಗೆ ಮತ್ತು ಇದಕ್ಕೆ ಸಂಬಂಧಿಸಿದ ಇತರ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ ಮಂಡಳಿ ರಚಿಸಲಾಗುವುದು. ಇದಕ್ಕಾಗಿ ಸಾರಿಗೆ ಇಲಾಖೆಯು ಪ್ರತಿ ವರ್ಷ ಸುಂಕದ ಮೂಲಕ ₹300 ಕೋಟಿ ನಿಧಿ ಸಂಗ್ರಹಿಸಿ ನೀಡಲಿದೆ ಎಂದರು.

ಜಲಜೀವನ್‌ ಮಿಷನ್:

ಕೇಂದ್ರ ಸರ್ಕಾರದ ಜಲಜೀವನ್‌ ಮಿಷನ್‌ ಯೋಜನೆಯಡಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಿಗೆ ಅನುಮೋದನೆ ನೀಡಿದೆ.

* ಮೈಸೂರು ಜಿಲ್ಲೆಯ ಎಚ್‌.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಮತ್ತು ಇತರೆ 134 ಜನ ವಸತಿಗಳ ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ₹101.73 ಕೋಟಿ, ಇದೇ ತಾಲ್ಲೂಕಿನ ಹಂಪಾಪುರ ಮತ್ತು ಇತರೆ 48 ಜನವಸತಿ ತಾಲ್ಲೂಕುಗಳಿಗೆ ಕುಡಿಯುವ ನೀರು ಯೋಜನೆಗೆ ₹65.07 ಕೋಟಿ, ದೊಡ್ಡಬಾಗಿಲು ಮತ್ತು ಇತರೆ 24 ಜನವಸತಿ ತಾಲ್ಲೂಕುಗಳಿಗೆ ₹34 ಕೋಟಿ, ಹಾವೇರಿ ತಾಲ್ಲೂಕಿನ ನೆಗಳೂರು ಮತ್ತು ಇತರೆ ಮೂರು ಗ್ರಾಮಗಳಿಗೆ ನೀರು ಒದಗಿಸಲು ₹18 ಕೋಟಿ, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮತ್ತು ಉಳ್ಳಾಲ ತಾಲ್ಲೂಕಿನ 24 ಗ್ರಾಮಗಳಿಗೆ ಕುಡಿಯುವ ನೀರು ಒದಗಿಸಲು ₹245 ಕೋಟಿ ನೀಡಲು ಅನುಮೋದನೆ.


ಪ್ರಮುಖ ತೀರ್ಮಾನಗಳು:

* ಕೇಂದ್ರ ಸರ್ಕಾರದ ಯೋಜನೆಯಾದ ಡಿಜಿಟಲ್‌ ಇಂಡಿಯಾ ಭೂದಾಖಲೆ ಆಧುನೀಕರಣ ಕಾರ್ಯಕ್ರಮದಡಿ 3,455 ಕಂಪ್ಯೂಟರ್‌, ಸ್ಕ್ಯಾನರ್‌, ರೋವರ್‌ ಮತ್ತು ಪ್ರಿಂಟರ್‌ಗಳ ಖರೀದಿಗೆ ₹30.45 ಕೋಟಿ

* ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಷೇರು ಬಂಡವಾಳವನ್ನು ₹600 ಕೋಟಿಯಿಂದ ₹1,200 ಕೋಟಿಗೆ ಹೆಚ್ಚಳ ಮಾಡಲು ಒಪ್ಪಿಗೆ

* ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ಸಂಸ್ಥೆಯು ಬೆಂಗಳೂರಿನ ಹಲಸೂರು ಕೆರೆಯ ಬಳಿ ₹18 ಕೋಟಿ ವೆಚ್ಚದಲ್ಲಿ ಪ್ರವಾಸಿ ಸೌಧ ಕಟ್ಟಡ ನಿರ್ಮಿಸುವ ಪ್ರಸ್ತಾಪಕ್ಕೆ ಒಪ್ಪಿಗೆ

* ವಿಜಯಪುರದ ಶ್ರೀ ಸಿದ್ಧಾರ್ಥ ಸ್ಮಾರಕ ಟ್ರಸ್ಟ್‌ಗೆ ಶೈಕ್ಷಣಿಕ ಉದ್ದೇಶಕ್ಕಾಗಿ 1,18,284.68 ಚದರಡಿ ವಿಸ್ತೀರ್ಣವುಳ್ಳ ನಾಗರಿಕ ಸೌಲಭ್ಯ ನಿವೇಶನವನ್ನು ಶೇ 50ರ ರಿಯಾಯಿತಿ ದರದಲ್ಲಿ ಹಂಚಿಕೆ ಮಾಡಲು ಒಪ್ಪಿಗೆ

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT