ಭಾನುವಾರ, 3 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಲು ಮರದ ತಿಮ್ಮಕ್ಕಗೆ ಸಂಪುಟ ದರ್ಜೆ ಸ್ಥಾನಮಾನ: ಸರ್ಕಾರದ ಆದೇಶ

Last Updated 8 ಜುಲೈ 2022, 14:40 IST
ಅಕ್ಷರ ಗಾತ್ರ

ಬೆಂಗಳೂರು: ಸಾಲುಮರದ ತಿಮ್ಮಕ್ಕ ಅವರನ್ನು ಪರಿಸರ ರಾಯಭಾರಿಯನ್ನಾಗಿ ನೇಮಿಸಿರುವ ರಾಜ್ಯ ಸರ್ಕಾರ, ಮುಂದಿನ ಆದೇಶದವರೆಗೆ ಅವರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ ನೀಡಿ ಶುಕ್ರವಾರ ಆದೇಶ ಹೊರಡಿಸಿದೆ.

ತಿಮ್ಮಕ್ಕ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ಘೋಷಿಸಿದ್ದರು. ಅದರಂತೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಡಿಪಿಎಆರ್‌) ಶಿಷ್ಟಾಚಾರ ವಿಭಾಗ ಅಧಿಸೂಚನೆ ಹೊರಡಿಸಿದೆ.

ತಿಮ್ಮಕ್ಕ ಅವರಿಗೆ ವೇತನ ಮತ್ತು ಭತ್ಯೆ, ವಸತಿಗೃಹ, ಸಿಬ್ಬಂದಿ, ಕಾರು ಸೇರಿದಂತೆ ಸಂಪುಟ ದರ್ಜೆ ಸಚಿವರಿಗೆ ದೊರೆಯುವ ಹಲವು ಸೌಲಭ್ಯಗಳು ದೊರೆಯಲಿವೆ ಎಂದು ಡಿಪಿಎಆರ್‌ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT