ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಕ್ಷೆ ಮಂಜೂರಾತಿಗೆ ಆ್ಯಪ್‌ ಅಭಿವೃದ್ಧಿ: ಸಚಿವ ಈಶ್ವರ ಖಂಡ್ರೆ

Published 11 ಅಕ್ಟೋಬರ್ 2023, 16:17 IST
Last Updated 11 ಅಕ್ಟೋಬರ್ 2023, 16:17 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮನೆ ನಿರ್ಮಿಸಲು ನಕ್ಷೆ ಮಂಜೂರಾತಿ ಬಯಸುವವರಿಗೆ ಮುಖಾಮುಖಿರಹಿತ (ಫೇಸ್‌ಲೆಸ್) ಸೇವೆ ನೀಡಲು ತಂತ್ರಾಂಶ (ಆ್ಯಪ್) ಅಭಿವೃದ್ಧಿಪಡಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ಬಿಬಿಎಂಪಿ ಕಾಯ್ದೆ 2020ರ ಕಲಂ 144(6)ಮತ್ತು (21)ರ ಅಂಶಗಳನ್ನು ಇತರ ಮಹಾನಗರ ಪಾಲಿಕೆ ಮತ್ತು ಸ್ಥಳೀಯ ಸಂಸ್ಥೆಗಳಿಗೂ ವಿಸ್ತರಿಸುವ ಕುರಿತ ಪರಿಶೀಲನೆ ನಡೆಸಲು ಖಂಡ್ರೆ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿ ರಚಿಸಲಾಗಿದ್ದು, ಈ ಸಮಿತಿಯ ಸಭೆ ಬುಧವಾರ ನಡೆಯಿತು. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಅನಧಿಕೃತ ಸ್ವತ್ತುಗಳನ್ನು ತೆರಿಗೆ ವ್ಯಾಪ್ತಿಗೆ ತರುವುದರಿಂದ ಆಗುವ ಸಾಧಕಬಾಧಕಗಳ ಬಗ್ಗೆಯೂ ಚರ್ಚೆ ನಡೆಯಿತು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಭೂಪರಿವರ್ತನೆ ಆಗದೆ, ಬಡಾವಣೆಗೆ ಅನುಮೋದನೆ ಪಡೆಯದೆ ಮತ್ತು ಮನೆಗಳಿಗೆ ನಕ್ಷೆಯ ಮಂಜೂರಾತಿಯೂ ಇಲ್ಲದೆ ಅನಧಿಕೃತವಾಗಿ ನಿರ್ಮಿಸುತ್ತಿರುವ ಮನೆಗಳಿಗೆ ಮತ್ತು ನಿವೇಶನಗಳಿಗೆ ‘ಬಿ’ ಖಾತೆ ನೀಡಲಾಗುತ್ತಿದೆ. ಇದನ್ನು ಯಾವುದಾದರೂ ಒಂದು ಹಂತದಲ್ಲಿ ನಿಲ್ಲಿಸಬೇಕಿದೆ. ಅದಕ್ಕೆ ರೂಪುರೇಷೆ ಸಿದ್ಧಪಡಿಸಲು ಅವರು ಸಲಹೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ನಕ್ಷೆ ಮಂಜೂರಾತಿ ಪಡೆದಿದ್ದರೂ ನಕ್ಷೆ ಉಲ್ಲಂಘಿಸಿ, ಹೆಚ್ಚುವರಿ ಅಂತಸ್ತು ನಿರ್ಮಿಸುವ ಮತ್ತು ಸೆಟ್ ಬ್ಯಾಕ್ ಬಿಡದೆ ನಿರ್ಮಿಸುವ ಕಟ್ಟಡಗಳ ವಿರುದ್ಧ ನಿರ್ಮಾಣ ಹಂತದಲ್ಲೇ ಕ್ರಮ ಕೈಗೊಳ್ಳಬೇಕು ಎಂದು ಅಭಿಪ್ರಾಯಪಟ್ಟ ಖಂಡ್ರೆ, ‌ವಾರ್ಡ್ ಹಂತದಲ್ಲಿ ಅನಧಿಕೃತವಾಗಿ ತಲೆ ಎತ್ತುವ ಮನೆಗಳನ್ನು ನಿಯಂತ್ರಿಸದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಕಾನೂನಿನಲ್ಲಿ ಮತ್ತು ಸ್ಥಳೀಯ ಸಂಸ್ಥೆಗಳ ನಿಯಮಗಳ ಅಡಿಯಲ್ಲಿ ಇರುವ ಅವಕಾಶ ಬಳಸಿಕೊಳ್ಳುವ ಬಗ್ಗೆಯೂ ಕಡತ ಮಂಡಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಬೆಂಗಳೂರಿನಲ್ಲಿ ಸುಮಾರು 20 ಲಕ್ಷ ಸ್ವತ್ತುಗಳಿದ್ದು, ಈ ಪೈಕಿ 6 ಲಕ್ಷಕ್ಕೂ ಹೆಚ್ಚು ‘ಬಿ’ ಖಾತೆಯ ಸ್ವತ್ತುಗಳಿವೆ. ಅನಧಿಕೃತ ಬಡಾವಣೆಯಲ್ಲಿ ಮನೆ ನಿರ್ಮಿಸಿರುವವರು ತೆರಿಗೆ ಪಾವತಿಸುತ್ತಿಲ್ಲ. ಖಾತೆಯನ್ನೂ ಮಾಡಿಸಿಕೊಂಡಿಲ್ಲ ಎಂದು ಅಧಿಕಾರಿಗಳು ಸಮಿತಿಯ ಗಮನಕ್ಕೆ ತಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT