ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೈನ್‌ ವಿ.ವಿ ಡೀಮ್ಡ್‌ ಮಾನ್ಯತೆ ರದ್ದುಪಡಿಸಿ: ಜೆಡಿಎಸ್, ಕಾಂಗ್ರೆಸ್ ಆಗ್ರಹ

Last Updated 16 ಫೆಬ್ರುವರಿ 2023, 4:15 IST
ಅಕ್ಷರ ಗಾತ್ರ

ಬೆಂಗಳೂರು: ‘ಜೈನ್‌ ವಿಶ್ವವಿದ್ಯಾಲಯದಲ್ಲಿ ಕಿರುನಾಟಕ ಅಭಿನಯ ಸಂದರ್ಭದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಅವಮಾನಿಸಲಾಗಿದೆ. ಇದು ಖಂಡನೀಯ. ವಿಶ್ವವಿದ್ಯಾಲಯದ ಡೀಮ್ಡ್ ಮಾನ್ಯತೆ ರದ್ದು ಮಾಡಬೇಕು’ ಎಂದು ವಿಧಾನಸಭೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಸದಸ್ಯರು ಆಗ್ರಹಿಸಿದರು.

ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಜೆಡಿಎಸ್‌ನ ಕೆ. ಅನ್ನದಾನಿ, ‘ದುರುದ್ದೇಶಪೂರ್ವಕವಾಗಿ ಈ ರೀತಿ ಮಾಡಲಾಗಿದೆ. ಅಪಮಾನ ಆಗುತ್ತದೆ ಎಂದು ಗೊತ್ತಿದ್ದರೂ ತಡೆಯುವ ಪ್ರಯತ್ನ ಮಾಡಿಲ್ಲ. ಪ್ರಾಧ್ಯಾಪಕರು, ಡೀನ್‍ಗಳು ನೋಡಿದ ನಂತರವೇ
ಪ್ರದರ್ಶನಕ್ಕೆ ಅವಕಾಶ ಸಿಕ್ಕಿರುತ್ತದೆ. ಜೈನ್ ವಿಶ್ವವಿದ್ಯಾಲಯವನ್ನು ಮುಚ್ಚಬೇಕು’ ಎಂದು ಪಟ್ಟು ಹಿಡಿದರು. ಅಲ್ಲದೆ, ಈಗಲೇ ಈ ನಿರ್ಧಾರ ಪ್ರಕಟಿಸಬೇಕು ಎಂದೂ ಆಗ್ರಹಿಸಿ ಸಭಾಧ್ಯಕ್ಷರ ಪೀಠದ ಎದುರು ಧರಣಿಗೆ ಮುಂದಾದರು.

ಇದಕ್ಕೆ ಧ್ವನಿಗೂಡಿಸಿದ ಕಾಂಗ್ರೆಸ್‌ನ ಯು.ಟಿ. ಖಾದರ್, ‘ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿರುವ ಜೈನ್ ವಿಶ್ವವಿದ್ಯಾಲಯದ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಆಡಳಿತ ಮಂಡಳಿಯ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ’ ಎಂದರು.

ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ, ‘ಅಂಬೇಡ್ಕರ್ ಬಗ್ಗೆ ಅವಹೇಳನ ಮಾಡುವುದನ್ನು ನಾವೂ ಸಹಿಸಲ್ಲ. ಈಗಾಗಲೇ ತನಿಖೆ ನಡೆದಿದೆ. ಕೆಲವು ವಿದ್ಯಾರ್ಥಿಗಳು ಈ ರೀತಿ ಮಾಡಿದ್ದಾರೆ. ಮುಂದೆ ಯಾವ ರೀತಿ ಕ್ರಮ ಕೈಗೊಳ್ಳಬೇಕೆಂದು ಪರಿಶೀಲಿಸುತ್ತೇವೆ’ ಎಂದು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT