ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ಮಾಜಿ ಸಚಿವರಿಗೆ ನೀಡಿದ್ದ ಗನ್‌ ಮ್ಯಾನ್‌ ಭದ್ರತೆ ವಾಪಸ್

Last Updated 30 ಜನವರಿ 2020, 7:00 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಮಾಜಿ ಸಚಿವರಿಗೆ ನೀಡಿದ್ದ ಗನ್ ಮ್ಯಾನ್ ಹಾಗೂ ಭದ್ರತೆಯನ್ನು ವಾಪಸ್ ಪಡೆಯಲಾಗಿದ್ದು, ಈ ಸಂಬಂಧ ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ.

'ಎ' ಮತ್ತು 'ಬಿ' ಶ್ರೇಣಿ ಎಂದು ವಿಭಜನೆ ಮಾಡಿ ರಾಜ್ಯದ 27 ಮಾಜಿ ಸಚಿವರಿಗೆ ನೀಡಲಾಗಿದ್ದ ಗನ್ ಮ್ಯಾನ್ ಭದ್ರತೆ ವಾಪಸ್ ಪಡೆಯಲಾಗಿದೆ.

ಆರ್.ದೇಶಪಾಂಡೆ, ಬಂಡೆಪ್ಪ ಕಾಶೆಂಪುರ, ಡಿ.ಸಿ. ತಮ್ಮಣ್ಣ, ರಮೇಶ ಜಾರಕಿಹೋಳಿ, ಜಿ.ಟಿ. ದೇವೆಗೌಡ ಸೇರಿ 27 ಮಂದಿ ಮಾಜಿ ಸಚಿವರಿಗೆ ಗನ್ ಮ್ಯಾನ್ ಭದ್ರತೆ ನೀಡಲಾಗಿತ್ತು.

ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಗನ್ ಮ್ಯಾನ್ ಹಾಗೂ ಮನೆಗೆ ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿತ್ತು.

ಡಿ.ಕೆ. ಶಿವಕುಮಾರ್‌, ಜಿ.ಪರಮೇಶ್ವರ, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ,ಎಚ್.ಡಿ.ರೇವಣ್ಣ ಅವರಿಗೆ ‘Z’ ಶ್ರೇಣಿ ಭದ್ರತೆ ಮುಂದುವರಿಸಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT