ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ: ‘ಕೈ’ ನಾಯಕರ ಚರ್ಚೆ

Last Updated 9 ಜನವರಿ 2021, 7:18 IST
ಅಕ್ಷರ ಗಾತ್ರ

ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಆಯ್ಕೆ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆ ಭಾಗದ ಮುಖಂಡರ ಜೊತೆ ಶಮಿವಾರ ಸಮಾಲೋಚನಾ ಸಭೆ ನಡೆಸಿದರು.

ಈ ಕ್ಷೇತ್ರಗಳಿಗೆ ಶೀಘ್ರದಲ್ಲಿ ಉಪ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ಚುನಾವಣೆ ಘೋಷಣೆಗೂ ಮೊದಲೇ ಅಭ್ಯರ್ಥಿ ಹೆಸರು ಅಂತಿಮಗೊಳಿಸಿ, ಪ್ರಚಾರಕ್ಕಿಳಿಯಲು ಕಾಂಗ್ರೆಸ್ ನಿರ್ಧರಿಸಿದೆ. ಆರಂಭದಲ್ಲಿ ಬೆಳಗಾವಿ ಜಿಲ್ಲೆಯ ನಾಯಕರ ಜೊತೆ ಲೋಕಸಭಾ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ನಡೆಯಿತು.

ಹಿರಿಯ ಮುಖಂಡ, ರಾಜ್ಯ ಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ ಅಹಮದ್, ಸತೀಶ ಜಾರಕಿಹೊಳಿ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ, ಶಾಸಕ ಎಂ.ಬಿ. ಪಾಟೀಲ, ರಾಜ್ಯಸಭಾ ಸದಸ್ಯ ಎಲ್. ಹನುಮಂತಯ್ಯ, ಶಾಸಕಿಯರಾದ ಲಕ್ಷ್ಮಿ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್ ಮತ್ತಿತರರು ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT