ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬರ ಪರಿಹಾರ | ಕೇಳಿದಷ್ಟು ಹಣ ಕೊಡಲು ಸಾಧ್ಯವಿಲ್ಲ– ಹೆಚ್‌.ಡಿ.ಕುಮಾರಸ್ವಾಮಿ

Published 27 ಏಪ್ರಿಲ್ 2024, 16:35 IST
Last Updated 27 ಏಪ್ರಿಲ್ 2024, 16:35 IST
ಅಕ್ಷರ ಗಾತ್ರ

ಬೆಂಗಳೂರು:‘ಕೇಂದ್ರ ಸರ್ಕಾರ ಮಾರ್ಗಸೂಚಿ ಆಧಾರದಲ್ಲಿ ಹಣ ಬಿಡುಗಡೆ ಮಾಡುತ್ತದೆ. ಕೇಳಿದಷ್ಟು ಹಣ ಕೊಡಲು ಸಾಧ್ಯವಿಲ್ಲ. ಕೊಟ್ಟರೂ ರಾಜ್ಯ ಸರ್ಕಾರವನ್ನು ತೃಪ್ತಿಪಡಿಸಲು ಆಗದು’ ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಟೀಕಿಸಿದರು.

ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ನೊಂದಿರುವ ಜನರ ನೆರವಿಗೆ ಏನೂ ಮಾಡದೆ, ತಪ್ಪು ಮುಚ್ಚಿಟ್ಟುಕೊಳ್ಳಲು ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡುತ್ತಿದ್ದಾರೆ.  ಬರ ಸೇರಿದಂತೆ ರಾಜ್ಯ ಎದುರಿಸುತ್ತಿರುವ ಪ್ರತಿ ಸಮಸ್ಯೆಗೂ ಕೇಂದ್ರವೇ ಕಾರಣ ಎನ್ನುವಂತಿದೆ ಕಾಂಗ್ರೆಸ್ ಧೋರಣೆ’ ಎಂದು ದೂರಿದರು.  

15ನೇ ಹಣಕಾಸು ಆಯೋಗದ ಶಿಫಾರಸಿನ ಆಧಾರದಲ್ಲಿ ಹಣ ಬಿಡುಗಡೆಯಾಗುತ್ತದೆ. ಮೊದಲ ಕಂತಿನಲ್ಲಿ ಕೇಂದ್ರ ಸರ್ಕಾರ ₹3,454 ಕೋಟಿ ಪರಿಹಾರ ನೀಡಿದೆ. ಕಡಿಮೆ ಬಂದರೆ ಮತ್ತೆ ಕೇಳಬೇಕು, ಅದು ಬಿಟ್ಟು ರಾಜಕೀಯ ಮಾಡಿಕೊಂಡಿದ್ದರೆ ಏನು ಉಪಯೋಗ ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ತೀವ್ರ ಬರವಿದ್ದರೂ ರಾಜ್ಯ ಸರ್ಕಾರ ಏನನ್ನೂ ಮಾಡಿಲ್ಲ. ಖಾತೆಗೆ ಜಮೆ ಮಾಡಿದ ₹2 ಸಾವಿರ ಎಲ್ಲ ರೈತರನ್ನೂ ತಲುಪಿಲ್ಲ. ಆ ಹಣದಲ್ಲೂ ಕೇಂದ್ರದ ಪಾಲಿದೆ. ಅದನ್ನು ರಾಜ್ಯ ಸರ್ಕಾರ ಮರೆಮಾಚುತ್ತಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT