ಸೋಮವಾರಪೇಟೆ: ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಯಾಗಿದ್ದ ರವೀಂದ್ರನ್ (59) ಹುಣಸೂರು ಸಮೀಪದ ಚಿಲ್ಕುಂದ ಎಂಬಲ್ಲಿ ಸೋಮವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಮೈಸೂರಿನ ನಿವಾಸಿಯಾಗಿದ್ದ ಇವರು, ಕಳೆದ ಹದಿನೈದು ದಿನಗಳ ಹಿಂದೆ ತಾಯಿ ಕೋವಿಡ್‌ನಿಂದ ಮೃತರಾಗಿದ್ದರಿಂದ ಮೈಸೂರಿಗೆ ಹೋಗಿದ್ದರು. ರಜೆ ಮುಗಿಸಿ ಕರ್ತವ್ಯಕ್ಕೆ ಹಾಜರಾಗಲು ತನ್ನ ಮಾರುತಿ 800 ಕಾರಿನಲ್ಲಿ ಸೋಮವಾರಪೇಟೆಗೆ ಆಗಮಿಸುತ್ತಿದ್ದ ಸಂದರ್ಭ ಚಿಲ್ಕುಂದದ ಬಳಿ ರಸ್ತೆಯ ಪಕ್ಕದಲ್ಲಿರುವ ಮರವೊಂದಕ್ಕೆ ಕಾರು ಅಪ್ಪಳಿಸಿ ತೀವ್ರವಾಗಿ ಗಾಯಗೊಂಡಿದ್ದಾರೆ.

ನಂತರ ಮೈಸೂರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಸಂದರ್ಭ ದಾರಿಮಧ್ಯೆ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಸಹೋದರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗುಂಡ್ಲುಪೇಟೆಯಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿದ್ದರು. ಕಳೆದ 8 ತಿಂಗಳ ಹಿಂದೆ ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ವರ್ಗಾವಾಗಿ ಬಂದಿದ್ದು, ಕುಟಂಬದವರೊಂದಿಗೆ ವಸತಿ ಗೃಹದಲ್ಲಿ ವಾಸವಾಗಿದ್ದರು. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಆಗಲಿದ್ದಾರೆ.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದ ಸಂದರ್ಭ ಉತ್ತಮವಾಗಿ ಕೆಲಸ ನಿರ್ವಹಿಸಿದ ಹಿನ್ನೆಲೆಯಲ್ಲಿ ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಪಾತ್ರರಾಗಿ ಹಲವು ಭಾರಿ ಸನ್ಮಾನಕ್ಕೊಳಗಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.