ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ಶಾಸಕ ವಿನಯ ಕುಲಕರ್ಣಿ ವಿರುದ್ಧದ ಪ್ರಕರಣ: ಕಾಯ್ದಿರಿಸಿದ ತೀರ್ಪು

Published 15 ಮಾರ್ಚ್ 2024, 14:24 IST
Last Updated 15 ಮಾರ್ಚ್ 2024, 14:24 IST
ಅಕ್ಷರ ಗಾತ್ರ

ಬೆಂಗಳೂರು: ‘ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್‌ಗೌಡ ಗೌಡರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ಸೆಷನ್ಸ್‌ ನ್ಯಾಯಾಲಯ ನಿಗದಿಪಡಿಸಿರುವ ದೋಷಾರೋಪಣೆಯಲ್ಲಿ ಸಾಕಷ್ಟು ದೋಷಗಳಿವೆ’ ಎಂದು ಆಕ್ಷೇಪಿಸಿ ಪ್ರಕರಣದ ಆರೋಪಿಯೂ ಆದ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿನಯ ಕುಲಕರ್ಣಿ ಸಲ್ಲಿಸಿರುವ ರಿಟ್‌ ಅರ್ಜಿ ವಿಚಾರಣೆಯನ್ನು ಮುಕ್ತಾಯಗೊಳಿಸಿರುವ ಹೈಕೋರ್ಟ್‌ ತೀರ್ಪು ಕಾಯ್ದಿರಿಸಿದೆ.

‘ನನ್ನ ವಿರುದ್ಧ ಹೊರಿಸಲಾಗಿರುವ ದೋಷಾರೋಪಣೆ ಮತ್ತು ಬೆಂಗಳೂರು ಸಿಟಿ ಸಿವಿಲ್‌ ಕೋರ್ಟ್‌ನ ವಿಶೇಷ ನ್ಯಾಯಾಲಯದಲ್ಲಿ ನಡೆಯಲಿರುವ ವಿಚಾರಣಾ ನ್ಯಾಯಾಲಯದ ನ್ಯಾಯ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು’ ಎಂದು ಕೋರಿ ವಿನಯ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಆಲಿಕೆಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠ’ದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಶುಕ್ರವಾರ ಪೂರ್ಣಗೊಳಿಸಿದರು. ವಿನಯ ಕುಲಕರ್ಣಿ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಹಾಗೂ ಸಿಬಿಐ ಪರ ಪಿ.ಪ್ರಸನ್ನಕುಮಾರ್ ವಾದ ಮಂಡಿಸಿದರು.

ಪ್ರಕರಣವೇನು?: ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2016ರ ಜೂನ್‌ 15ರಂದು ಯೋಗೀಶ್‌ಗೌಡ ಗೌಡರ್ ಕೊಲೆ ನಡೆದಿತ್ತು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿದ್ದು, ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ. ಸಿಸಿಎಚ್‌–82ರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಒಟ್ಟು 21 ಆರೋಪಿಗಳ ವಿರುದ್ಧ ದೋಷಾರೋಪ ನಿಗದಿಪಡಿಸಿ 2024ರ ಜನವರಿ 29ರಿಂದ ಫೆಬ್ರುವರಿ 1ರವರೆಗೆ ನಿಯಮಿತವಾಗಿ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಆದೇಶಿಸಿತ್ತು. ಪ್ರಕರಣದ ಆರೋಪಿಯೂ ಆದ ವಿನಯ ಕುಲಕರ್ಣಿ, ದೋಷಾರೋಪ ನಿಗದಿ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT