ಭಾನುವಾರ, 10 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಮಲ್ಲಿಕಾರ್ಜುನ ವಿರುದ್ಧದ ಪ್ರಕರಣ ರದ್ದು

Published 19 ಅಕ್ಟೋಬರ್ 2023, 16:59 IST
Last Updated 19 ಅಕ್ಟೋಬರ್ 2023, 16:59 IST
ಅಕ್ಷರ ಗಾತ್ರ

ಬೆಂಗಳೂರು: ತೋಟದ ಮನೆಯಲ್ಲಿ ವನ್ಯಜೀವಿಗಳನ್ನು ಅಕ್ರಮವಾಗಿ ಪೋಷಣೆ ಮಾಡಿದ ಆರೋಪದಡಿ ಗಣಿ ಮತ್ತು ತೋಟಗಾರಿಕಾ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್‌ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.

ಪ್ರಕರಣ ರದ್ದುಪಡಿಸುವಂತೆ ಕೋರಿ ಎಸ್.ಎಸ್. ಮಲ್ಲಿಕಾರ್ಜುನ ಮತ್ತು ಅವರ ಅಣ್ಣ ಎಸ್.ಎಸ್. ಗಣೇಶ್, ಸಂಪಣ್ಣ ಮುತಾಲಿಕ್ ಹಾಗೂ ಜಿ.ಎಂ. ಕರಿಬಸಪ್ಪ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

‘ಅರಣ್ಯ ಹಾಗೂ ಪೊಲೀಸ್‌ ಅಧಿಕಾರಿಗಳು ಪ್ರಕರಣ ದಾಖಲಿಸುವಲ್ಲಿ ವನ್ಯಜೀವಿ ಅಪರಾಧ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಅಂತೆಯೇ, ದಾವಣಗೆರೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಅರ್ಜಿದಾರರ ವಿರುದ್ಧದ ಆರೋಪಗಳನ್ನು ಸಂಜ್ಞೇಯ ಅಪರಾಧ ಎಂದು ಪರಿಗಣಿಸಿರುವುದು ಗೊಂದಲಮಯವಾಗಿದೆ ಮತ್ತು ತನಿಖೆಗೆ ಆದೇಶಿಸುವಲ್ಲಿ ಲೋಪ ಎಸಗಲಾಗಿದೆ’ ಎಂದು ನ್ಯಾಯಪೀಠ ಹೇಳಿದೆ.

‘ತನಿಖಾಧಿಕಾರಿಯು ತನಿಖೆಯ ಪ್ರಕ್ರಿಯೆಯನ್ನೇ ತಲೆಕೆಳಗು ಮಾಡಿದ್ದು ಸರಿಪಡಿಸಲಾಗದಷ್ಟು ದೋಷಗಳು ಕಂಡುಬಂದಿವೆ. ಹೀಗಾಗಿ, ಪ್ರಕರಣದ ವಿಚಾರಣೆಗೆ ಅನುಮತಿ ನೀಡಿದರೆ ಅದು ಕಾನೂನು ಪ್ರಕ್ರಿಯೆಯ ದುರುಪಯೋಗ ಆದಂತೆ’ ಎಂದೂ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT