ಈಗ ಸಿದ್ಧಪಡಿಸಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಅಂಕಿ ಅಂಶಗಳಲ್ಲಿ ಸಾಕಷ್ಟು ಲೋಪದೋಷಗಳಿದ್ದು, ಮತ್ತೊಮ್ಮೆ ವೈಜ್ಞಾನಿಕವಾಗಿ ಜಾತಿಗಣತಿ ನಡೆಸಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಒತ್ತಾಯಿಸಿದೆ. ಮಹಾಸಭಾದ ಅಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆಯಲ್ಲಿ ಗುರುವಾರ ಬೆಂಗಳೂರಿನಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಸಮೀಕ್ಷೆ ಸಮರ್ಪಕವಾಗಿ ನಡೆದಿಲ್ಲ. ಹಲವರ ಮನೆಗಳಿಗೆ ಭೇಟಿ ನೀಡದೇ ವರದಿ ಸಿದ್ಧಪಡಿಸಲಾಗಿದೆ ಎಂಬ ದೂರುಗಳಿವೆ. ಈ ಸಮೀಕ್ಷೆಯಲ್ಲಿ ವೀರಶೈವ–ಲಿಂಗಾಯತ ಸಮುದಾಯದ ಜನಸಂಖ್ಯೆಯನ್ನು ಕಡಿಮೆ ತೋರಿಸಲಾಗಿದೆ ಎಂಬ ಮಾಹಿತಿ ಇದೆ. ಅಪೂರ್ಣ ಮಾಹಿತಿಯನ್ನು ಒಳಗೊಂಡ ಸಮೀಕ್ಷೆಯನ್ನು ಸ್ವೀಕರಿಸಿದರೆ, ಸಮಾಜಕ್ಕೆ ದೊಡ್ಡ ಮಟ್ಟದ ನಷ್ಟವಾಗಲಿದೆ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು ಎಂದು ಶಾಮನೂರು ತಿಳಿಸಿದ್ದಾರೆ. #newsexpress #lingayat #census