ಬೆಂಗಳೂರು: ‘ಹಿಂದುಳಿದ ವರ್ಗಗಳ ಆಯೋಗ 2015ರಲ್ಲಿ ನಡೆಸಿದ್ದ ಸಮೀಕ್ಷೆಯ ವರದಿಯನ್ನು ಜಾರಿಗೊಳಿಸುವುದಕ್ಕೆ ಮುನ್ನ ಮರುಪರಿಶೀಲಿಸುವ ಅಗತ್ಯವಿದೆ’ ಎಂದು ಕಾಂಗ್ರೆಸ್ ಮುಖಂಡ ವೀರಪ್ಪ ಮೊಯಿಲಿ ಅಭಿಪ್ರಾಯಪಟ್ಟಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ‘ವಿವಿಧ ಸಮುದಾಯಗಳು ವರದಿಯ ಬಗ್ಗೆ ಅನುಮಾನ ವ್ಯಕ್ತಪಡಿಸಿರುವುದರಿಂದ ಮರು ಸಮೀಕ್ಷೆ ನಡೆಸುವ ಅಗತ್ಯವೂ ಇದೆ’ ಎಂದು ಪ್ರತಿಪಾದಿಸಿದ್ದಾರೆ.

‘ಸಮೀಕ್ಷೆಯಲ್ಲಿ ಸಂಗ್ರಹಿಸಿರುವ ದತ್ತಾಂಶಗಳನ್ನು ಮರು ಪರಿಶೀಲಿಸುವ ವಿಚಾರದಲ್ಲಿ ಸರ್ಕಾರವು ಎಲ್ಲ ರಾಜಕೀಯ ಪಕ್ಷಗಳ ಜೊತೆ ಸಮಾಲೋಚನೆ ನಡೆಸಿ ಒಮ್ಮತಕ್ಕೆ ಬರಬೇಕು’ ಎಂದಿದ್ದಾರೆ.

‘1992ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಚಿನ್ನಪ್ಪ ರೆಡ್ಡಿ ಆಯೋಗದ ವರದಿಯನ್ನು ಬಿಡುಗಡೆ ಮಾಡಿದಾಗ, ಲಿಂಗಾಯತರ ಜನಸಂಖ್ಯೆಯು ಪ್ರಸ್ತುತ ವರದಿಗಿಂತ ಹೆಚ್ಚು ಇತ್ತು. ಇಷ್ಟು ವರ್ಷಗಳ ನಂತರ ಜನಸಂಖ್ಯೆ ಹೇಗೆ ಕಡಿಮೆಯಾಗುತ್ತದೆ? ಈ ಕಾರಣಕ್ಕೆ ಸಮೀಕ್ಷಾ ವರದಿಯ ಮರು ಮೌಲ್ಯಮಾಪನದ ಅಗತ್ಯವಿದೆ’ ಎಂದೂ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.