ಬೆಂಗಳೂರು: ‘ಸಂಖ್ಯೆಯಲ್ಲಿ ಅಲ್ಪಸಂಖ್ಯಾತರಾದರೂ ದೇಶ ಸೇವೆಯಲ್ಲಿ ಕೊಡವ ಸಮಾಜದವರಿಗೆ ಸರಿಸಮಾನ ಬೇರೆ ಇಲ್ಲ. ಸಂಸ್ಕೃತಿ ಮತ್ತು ಶಿಸ್ತಿನಲ್ಲಿ ಕೊಡವರು ಮುಂಚೂಣಿಯಲ್ಲಿದ್ದಾರೆ. ಸೈನ್ಯ, ದೇಶ ರಕ್ಷಣೆ, ಕ್ರೀಡೆ ಮತ್ತು ರಾಜಕಾರಣಕ್ಕೆ ಕೊಡವರ ಕೊಡುಗೆ ಅಪಾರ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ವಸಂತನಗರದ ಕೊಡವ ಸಭಾಂಗಣದಲ್ಲಿ ಕೊಡವ ಸಮಾಜ ಭಾನುವಾರ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ‘ಸರ್ವರನ್ನೂ ಸಮಾನವಾಗಿ ಕಾಣುವುದು ಕಾಂಗ್ರೆಸ್ ಪಕ್ಷದ ಸಂಸ್ಕೃತಿ. ಎಲ್ಲ ಜಾತಿ, ಧರ್ಮದವರನ್ನೂ ಭಾರತೀಯರು, ಭಾರತೀಯ ಪ್ರಜೆಗಳು ಎಂದು ಕಾಂಗ್ರೆಸ್ ಪರಿಗಣಿಸುತ್ತದೆ’ ಎಂದರು.

‘ಜಾತಿ, ಧರ್ಮ ಮನೆಯ ಒಳಗಿನ ಆಚರಣೆಯಾಗಲಿ. ಹೊರಗೆ ಬಂದ ಕೂಡಲೇ ನಾವೆಲ್ಲರೂ ಒಂದೇ, ನಾವು ಭಾರತೀಯರಾಗಬೇಕು. ದೇಶ ರಕ್ಷಣೆಯಲ್ಲಿ ಮುಂಚೂಣಿಯಲ್ಲಿರುವ ಕೊಡವರು ಜಾತಿ-ಧರ್ಮ ಮಾಡುವವರಲ್ಲ. ಎಲ್ಲರನ್ನೂ ಭಾರತೀಯರು ಎಂದು ಗೌರವಿಸುವವರು’ ಎಂದು ಅವರು ಹೇಳಿದರು.

‘ಎ.ಕೆ. ಸುಬ್ಬಯ್ಯ ಮತ್ತು ಎಂ.ಸಿ. ನಾಣಯ್ಯ ಉತ್ತಮ ಸಂಸದೀಯ ಪಟುಗಳು. ಅವರು ಸದನದಲ್ಲಿ ಸಮಾಜಮುಖಿಯಾಗಿ ಮಾತನಾಡಿದ ಫೈರ್ ಬ್ರಾಂಡ್ಗಳು. ಹಾಲಿ ಶಾಸಕ ಎ.ಎಸ್. ಪೊನ್ನಣ್ಣ ಅವರಿಗೂ ಫೈರ್ ಬ್ರಾಂಡ್ ಆಗುವ ಲಕ್ಷಣಗಳಿವೆ’ ಎಂದರು.

‘ಯಾವುದೇ ಸಮುದಾಯ ಸರ್ಕಾರದಿಂದ ಜಾಗ ಕೇಳಿದರೆ ಮಾರ್ಗಸೂಚಿ ದರದ ಶೇ 10ರಷ್ಟು ಬೆಲೆಗೆ ಕೊಡಬೇಕು ಎಂದು ಕಂದಾಯ ಸಚಿವರಿಗೆ ಸೂಚಿಸಿದ್ದೇನೆ. ಅದರಂತೆ ಕೊಡವ ಸಮಾಜಕ್ಕೂ ಜಾಗ ನೀಡಿದ್ದೇವೆ’ ಎಂದರು.

ಸಚಿವರಾದ ಕೆ.ಜೆ. ಜಾರ್ಜ್, ಬೈರತಿ ಸುರೇಶ್, ಕೃಷ್ಣ ಬೈರೇಗೌಡ, ಶಾಸಕರಾದ ಎ.ಎಸ್. ಪೊನ್ನಣ್ಣ, ಶಾಸಕ ಮಂಥರ್ ಗೌಡ, ರಿಜ್ವಾನ್ ಅರ್ಷದ್, ಕೊಡವ ಸಮಾಜದ ಅಧ್ಯಕ್ಷ ಕೆ.ಟಿ. ಪೆಮ್ಮಯ್ಯ, ಉಪಾಧ್ಯಕ್ಷ ಪಿ.ಕೆ. ಮುತ್ತಪ್ಪ ಇದ್ದರು.

‘ಕಾರ್ಯಪ್ಪ ಹೆಸರು ಉಳಿಸಲು ಬದ್ಧ’

‘ಮೆಟ್ರೊ ನಿಲ್ದಾಣಕ್ಕೆ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರ ಹೆಸರಿಡುವ ಬಗ್ಗೆ ಮುಖ್ಯಮಂತ್ರಿ ಮತ್ತು ನಾನು ಚರ್ಚಿಸಿ ತೀರ್ಮಾನಿಸುತ್ತೇವೆ. ಕಾರ್ಯಪ್ಪ ಅವರ ಹೆಸರು ಉಳಿಸುವ ಕೆಲಸ ಮಾಡುತ್ತೇವೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು. ‘ಇಡೀ ದೇಶಕ್ಕೆ ಕೊಡಗು ಹಾಗೂ ಕೊಡವರು ಆಭರಣ ಇದ್ದಂತೆ. ಸಂಸ್ಕೃತಿ ಹಾಗೂ ಪರಂಪರೆಗಳನ್ನು ನಾವು ಹಾಳು ಮಾಡಿಕೊಳ್ಳಬಾರದು ಎಂಬುದು ನಮ್ಮ ಬಯಕೆ. ಕೊಡವ ಸಮಾಜಕ್ಕೆ ನೀಡಿರುವ 7 ಎಕರೆ ಜಮೀನಿಗೆ ₹ 30 ಕೋಟಿಯಿಂದ ₹ 40 ಕೋಟಿ ಕಡಿಮೆ ಮಾಡಿರುವುದು ದೊಡ್ಡ ವಿಚಾರವಲ್ಲ. ಅದಕ್ಕಿಂತ ನಿಮ್ಮ ತ್ಯಾಗ ಪರಿಶ್ರಮ ಶಿಸ್ತು ದೊಡ್ಡದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.