ಬೆಂಗಳೂರು: ‘ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಗೊಂದಲಗಳನ್ನು ಶೀಘ್ರದಲ್ಲೇ ಸರಿಪಡಿಸಲಾಗುವುದು. ನಿಗದಿತ ಗಡುವಿನೊಳಗೆ ಸಮೀಕ್ಷೆ ಪೂರ್ಣಗೊಳಿಸುತ್ತೇವೆ’ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಹೇಳಿದರು.

ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ‘ಕೆಲವೆಡೆ ಸಮೀಕ್ಷೆಗೆ ಸರ್ವರ್ ಸಮಸ್ಯೆಯಾಗುತ್ತಿದೆ. ಅಧಿಕಾರಿಗಳ ಜೊತೆ ಚರ್ಚಿಸಿ ಸಮಸ್ಯೆಗಳನ್ನು ಸರಿಪಡಿಸಲಾಗುವುದು. ಗುರುವಾರ ಎಲ್ಲವೂ ಸರಿ ಹೋಗಲಿದೆ’ ಎಂದರು.

‘ಬೆಂಗಳೂರಿನ ಕೆಲವು ಕಡೆಗಳಲ್ಲಿ ಸಮೀಕ್ಷೆ ಇನ್ನೂ ಆರಂಭವಾಗಿಲ್ಲ. ಸಮೀಕ್ಷೆ ಪ್ರಶ್ನಿಸಿ ಕೆಲವರು ಕೋರ್ಟ್ ಮೆಟ್ಟಿಲೇರಿದ್ದು, ಆದೇಶ ಬರದೇ ಏನೂ ಪ್ರತಿಕ್ರಿಯೆ ನೀಡುವುದಿಲ್ಲ. ಕಾನೂನು ಪಾಲನೆ ಮಾಡಬೇಕಿರುವುದು ನಮ್ಮ ಕರ್ತವ್ಯ’ ಎಂದರು.

‘ಸಮೀಕ್ಷೆಗೆ ಸಂಬಂಧಿಸಿದಂತೆ ನನ್ನ ಮುಂದೆ ಯಾವ ಸಚಿವರು ವಿರೋಧ ವ್ಯಕ್ತಪಡಿಸಿಲ್ಲ. ಬದಲಾಗಿ ಕೆಲವರು ಸಲಹೆ ನೀಡಿದ್ದಾರೆ’ ಎಂದ ಅವರು, ‘ಆಯೋಗದ ವಿಚಾರಗಳಲ್ಲಿ ನಾನು ಮಧ್ಯಪ್ರವೇಶಿಸುವುದಿಲ್ಲ. ಸಮೀಕ್ಷೆ ವೇಳೆ ಎದುರಾಗಿರುವ ಗೊಂದಲಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಸಮಾಲೋಚಿಸುತ್ತೇನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.