ಶುಕ್ರವಾರ, 12 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾತಿವಾರು ಜನಗಣತಿ: ವರದಿ ಸಲ್ಲಿಕೆ ಇಂದು

Published 28 ಫೆಬ್ರುವರಿ 2024, 23:41 IST
Last Updated 28 ಫೆಬ್ರುವರಿ 2024, 23:41 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗವು 2015ರಲ್ಲಿ ನಡೆಸಿದ್ದ ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ’ (ಜಾತಿವಾರು ಜನಗಣತಿ) ವರದಿಯು ರಾಜ್ಯ ಸರ್ಕಾರಕ್ಕೆ ಗುರುವಾರ ಅಧಿಕೃತವಾಗಿ ಸಲ್ಲಿಕೆಯಾಗಲಿದೆ.

ರಾಜ್ಯದ ಎಲ್ಲ ಕುಟುಂಬಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಯನ್ನು ಅರಿಯಲು ₹158.47 ಕೋಟಿ ವೆಚ್ಚದಲ್ಲಿ ಎಚ್‌. ಕಾಂತರಾಜ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗವು 2015ರಲ್ಲಿ ಸಮೀಕ್ಷೆ ನಡೆಸಿತ್ತು. ಆದರೆ, ಆಯೋಗದ ಅವಧಿ ಮುಕ್ತಾಯವಾಗುವ ಸಂದರ್ಭದಲ್ಲಿ ವರದಿಯನ್ನು ಅಧಿಕೃತವಾಗಿ ಸರ್ಕಾರಕ್ಕೆ ಸಲ್ಲಿಸಿರಲಿಲ್ಲ.

ಕೆ. ಜಯಪ್ರಕಾಶ್‌ ಹೆಗ್ಡೆ ಅಧ್ಯಕ್ಷತೆಯ ಈಗಿನ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ವಿವಿಧ ವಿಷಯಕ್ಕೆ ಸಂಬಂಧಿಸಿದ ಟಿಪ್ಪಣಿಗಳೊಂದಿಗೆ 2015ರ ಸಮೀಕ್ಷಾ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಲ್ಲಿಸಲಿದೆ.

ಈ ಕುರಿತು ‘ಪ್ರಜಾವಾಣಿ’ ಜತೆ ಮಾತನಾಡಿದ ಹೆಗ್ಡೆ, ‘ಗುರುವಾರ ಮುಖ್ಯಮಂತ್ರಿಯವರ ಭೇಟಿಗೆ ಸಮಯ ಕೋರಿದ್ದೇವೆ. ಅವರು ಸೂಚಿಸಿದ ಸಮಯಕ್ಕೆ ಭೇಟಿಮಾಡಿ ವರದಿ ಹಾಗೂ ಸಮೀಕ್ಷೆಯ ದತ್ತಾಂಶಗಳನ್ನು ಒಳಗೊಂಡ ಬೃಹತ್‌ ಪೆಟ್ಟಿಗೆಯೊಂದನ್ನು ಸರ್ಕಾರಕ್ಕೆ ಹಸ್ತಾಂತರಿಸಲಾಗುವುದು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT