ಬೆಂಗಳೂರು: ಮಾರ್ಚ್ 4ರಿಂದ ದ್ವಿತೀಯ ಪಿಯು ಪರೀಕ್ಷೆ ಆರಂಭವಾಗಲಿದ್ದು, ಪ್ರಶ್ನೆಪತ್ರಿಕೆ ಸೋರಿಕೆ, ಮೊಬೈಲ್ ಬಳಕೆ, ಬದಲಿ ವ್ಯಕ್ತಿಯಿಂದ ಪರೀಕ್ಷೆ ಬರೆಸುವುದು,ನಕಲು ಮಾಡುವುದು ಸಹಿತ ಪರೀಕ್ಷಾ ಅಕ್ರಮಗಳಲ್ಲಿ ತೊಡಗಿದರೆ ₹ 5 ಲಕ್ಷ ದಂಡ ಹಾಗೂ 5 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಎಚ್ಚರಿಕೆಯನ್ನು ಸರ್ಕಾರ ನೀಡಿದೆ.

ಇಲಾಖೆಯ ನಿರ್ದೇಶಕಿ ಎಂ.ಕನಗವಲ್ಲಿ ಅವರು ಈ ನಿಟ್ಟಿನಲ್ಲಿ ಸುತ್ತೋಲೆ ಹೊರಡಿಸಿದ್ದು, ವಿದ್ಯಾರ್ಥಿಗಳು ಮಾತ್ರವಲ್ಲ, ಕೊಠಡಿ ಮೇಲ್ವಿಚಾರಕರೂ ಪರೀಕ್ಷೆ ವೇಳೆ ಮೊಬೈಲ್ ಬಳಸುವಂತಿಲ್ಲ. ಎಲೆಕ್ಟ್ರಾನಿಕ್ ಕೈಗಡಿಯಾರ, ಇ–ಕ್ಯಾಮೆರಾ, ಲ್ಯಾಪ್ ಟಾಪ್ನಂತಹ ವಿದ್ಯುನ್ಮಾನ ಉಪಕರಣಗಳನ್ನು ಸಹ ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಹೇಳಿದ್ದಾರೆ.

ಫೆ. 26ರ ಒಳಗೆ ಅರ್ಹ ವಿದ್ಯಾರ್ಥಿಗಳಿಗೆ ಪ್ರವೇಶಪತ್ರ ವಿತರಿಸಬೇಕು ಎಂದು ತಿಳಿಸಲಾಗಿದೆ. ಪರೀಕ್ಷೆ 3 ಗಂಟೆ 15 ನಿಮಿಷ ಅವಧಿಯದ್ದಾಗಿದ್ದು, ವಿದ್ಯಾರ್ಥಿ ಕೊಠಡಿಯೊಳಗೇ ಇರುವಂತೆ ಸೂಚಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.