ನೋಂದಣಿಯ ಗರಿಷ್ಠ ಸಮಯ 10 ನಿಮಿಷ:
ಎ–ಖಾತಾ, ಬಿ–ಖಾತಾ, ಇ–ಸ್ವತ್ತು, ಪಹಣಿ, ಆಧಾರ್ ಕಾರ್ಡ್ ಮಾಹಿತಿಗಳನ್ನು ನಗರ ಸ್ಥಳೀಯ ಸಂಸ್ಥೆಗಳ ವಿವಿಧ ತಂತ್ರಾಂಶ, ಭೂಮಿ ತಂತ್ರಾಂಶಗಳ ಮೂಲಕ ನೇರವಾಗಿ ಪಡೆಯಲಾಗುತ್ತಿದೆ. ಜನರು ಆಸ್ತಿ ನೋಂದಣಿಯ ಮಾಹಿತಿಯನ್ನು ಅಪ್‌ಲೋಡ್ ಮಾಡುತ್ತಿದ್ದಂತೆ ಆಸ್ತಿ ಮಾಲೀಕರ ಸಂಪೂರ್ಣ ಚಿತ್ರಣ ಖಚಿತವಾಗುತ್ತದೆ. ಉಪ ನೋಂದಣಾಧಿಕಾರಿಗಳು ಪರಿಶೀಲನೆ ನಡೆಸಿದ ನಂತರ ಜನರೇ ನೇರವಾಗಿ ದಿನ ಹಾಗೂ ಸಮಯ ನಿಗದಿ ಮಾಡಿಕೊಳ್ಳಬಹುದು. ಯಾರು ಯಾವ ದಿನವನ್ನು ನೋಂದಣಿಗಾಗಿ ಆಯ್ಕೆ ಮಾಡಿಕೊಳ್ಳುತ್ತಾರೋ ಆ ದಿನಕ್ಕೆ ಒಂದು ದಿನ ಮುಂಚಿತವಾಗಿ (ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ) ನೋಂದಣಿ ಮತ್ತು ಮುದ್ರಾಂಕ ಶುಲ್ಕವನ್ನು ಪಡೆಯುವ ವ್ಯವಸ್ಥೆ ಮಾಡಲಾಗಿದೆ. ಜನರು ಕಚೇರಿಗೆ ಭೇಟಿ ನೀಡಿದ 10 ನಿಮಿಷಗಳಲ್ಲಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸುವುದನ್ನು ಕಡ್ಡಾಯಗೊಳಿಸಲಾಗಿದೆ.