ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯದಲ್ಲಿ ಕಾವೇರಿ ಆರತಿ: ಗಂಗಾರತಿ ಸಭಾದಿಂದ ಮಾಹಿತಿ ಪಡೆದ ಸಚಿವ ಚಲುವರಾಯಸ್ವಾಮಿ

Published : 21 ಸೆಪ್ಟೆಂಬರ್ 2024, 4:49 IST
Last Updated : 21 ಸೆಪ್ಟೆಂಬರ್ 2024, 4:49 IST
ಫಾಲೋ ಮಾಡಿ
Comments

ಬೆಂಗಳೂರು: ಗಂಗಾ ಆರತಿ (Ganga Aarti) ಮಾದರಿಯಲ್ಲಿ ರಾಜ್ಯದಲ್ಲಿ ಕಾವೇರಿ ಆರತಿ (Cauvery Aarti) ನಡೆಸಲು ಸರ್ಕಾರ ನಿರ್ಧರಿಸಿದ್ದು, ಈ ಸಂಬಂಧ ಅಧ್ಯಯನ ನಡೆಸಲು ಕೃಷಿ ಸಚಿವ ಎನ್​. ಚಲುವರಾಯಸ್ವಾಮಿ ನೇತೃತ್ವದ ನಿಯೋಗ ಹರಿದ್ವಾರಕ್ಕೆ ತೆರಳಿದೆ.

ಈ ಸಂಬಂಧ ಚಲುವರಾಯಸ್ವಾಮಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಶುಕ್ರವಾರ ರಾತ್ರಿ ನಮ್ಮ ನಿಯೋಗ ಗಂಗಾ ಆರತಿ ಕಾರ್ಯಕ್ರಮ ವೀಕ್ಷಣೆ ಮಾಡಿತು. ನಂತರ ಗಂಗಾರತಿ ಸಭಾದೊಂದಿಗೆ ಸಭೆ ನಡೆಸಿ ಸಂಪೂರ್ಣ ಮಾಹಿತಿ ಪಡೆಯಲಾಯಿತು ಎಂದು ಅವರು ಬರೆದುಕೊಂಡಿದ್ದಾರೆ.

ಗಂಗಾರತಿ ಮಾದರಿಯಲ್ಲಿಯೇ ಕಾವೇರಿ ಆರತಿಗೆ ಆಲೋಚನೆ ನಡೆಸಲಾಗಿದ್ದು, ಈ ಬಗ್ಗೆ ಅಧ್ಯಯನ ನಡೆಸಲು ಸಮಿತಿಯ ಸದಸ್ಯರೊಂದಿಗೆ ಇಂದು ಪುರಾತನ ಹರಿದ್ವಾರಕ್ಕೆ ಭೇಟಿ ನೀಡಿ, ಗಂಗಾರತಿ ಸಭಾದೊಂದಿಗೆ ಚರ್ಚೆ ನಡೆಸಿ ಮಾಹಿತಿ ಪಡೆದುಕೊಂಡಿದ್ದೇವೆ. ಇದರ ಭಾಗವಾಗಿ ನಾಳೆ ವಾರಾಣಸಿಯಲ್ಲಿ ಗಂಗಾರತಿಯನ್ನು ನೋಡಲು ಹೋಗುತ್ತಿದ್ದೇವೆ.

ನಮ್ಮ ಜೀವನದಿಯಾಗಿರುವ ಕಾವೇರಿ ಗಂಗೆಯಷ್ಟೇ ಪವಿತ್ರವಾಗಿದೆ. ದಸರಾ ಸಂದರ್ಭದಲ್ಲಿ ಕಾವೇರಿ ಆರತಿಯನ್ನು ಪ್ರಾರಂಭಿಸಲು ಚಿಂತನೆ ನಡೆಸಲಾಗಿದೆ. ಅತಿ ಶೀಘ್ರದಲ್ಲಿ ಸರ್ಕಾರಕ್ಕೆ ವರದಿಯನ್ನು ಒಪ್ಪಿಸಿ, ಆದಷ್ಟು ಬೇಗ ಕಾವೇರಿ ಆರತಿ ಮಾಡುವ ಸ್ಥಳ ಹಾಗೂ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಅವರು ಬರೆದುಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT