ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡಿಗೆ ನೀರು ಹರಿಸಲು CWMA ಆದೇಶ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕರ್ನಾಟಕ

Published 20 ಸೆಪ್ಟೆಂಬರ್ 2023, 6:19 IST
Last Updated 20 ಸೆಪ್ಟೆಂಬರ್ 2023, 6:19 IST
ಅಕ್ಷರ ಗಾತ್ರ

ನವದೆಹಲಿ: ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್‌ ನೀರು ಹರಿಸಬೇಕು ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹೊರಡಿಸಿರುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಕೋರಿ ಸುಪ್ರೀಂ ಕೋರ್ಟ್‌ಗೆ ರಾಜ್ಯ ಸರ್ಕಾರ ಬುಧವಾರ ಪ್ರಮಾಣಪತ್ರ ಸಲ್ಲಿಸಿದೆ. 

‘ತಮಿಳುನಾಡಿಗೆ ನೀರು ಹರಿಸಬೇಕು ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆಗಸ್ಟ್‌ 11, ಆಗಸ್ಟ್‌ 29 ಹಾಗೂ ಸೆಪ್ಟೆಂಬರ್‌ 18ರಂದು ಹೊರಡಿಸಿರುವ ಆದೇಶ ನ್ಯಾಯಸಮ್ಮತವಲ್ಲ. ಸೆಪ್ಟೆಂಬರ್‌ 18ರಂದು ಹೊರಡಿಸಿರುವ ಆದೇಶವನ್ನು ಪುನರ್‌ಪರಿಶೀಲಿಸಬೇಕು ಎಂಬುದಾಗಿ ಪ್ರಾಧಿಕಾರಕ್ಕೆ ನಿರ್ದೇಶನ ನೀಡಬೇಕು’ ಎಂದೂ ರಾಜ್ಯ ಹೇಳಿದೆ. 

ಜತೆಗೆ, ವಕೀಲ ವಿವೇಕ್‌ ಸುಬ್ಬಾ ರೆಡ್ಡಿ, ಸ್ಯಾಂಕಿ ಉದ್ಯಾನ ನಡಿಗೆದಾರರ ಸಂಘ, ಎಂಬಸಿ ಹೆರಿಟೇಜ್‌ ಅಪಾರ್ಟ್‌ಮೆಂಟ್‌ ಓನರ್ಸ್‌ ಅಸೋಸಿಯೇಷನ್‌, ಮಲ್ಲೇಶ್ವರ ಕಮರ್ಷಿಯಲ್‌ ಫೋರಂ ಸೇರಿದಂತೆ ಒಂಬತ್ತು ಸಂಘ ಸಂಸ್ಥೆಗಳು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿವೆ. 

‘ರಾಜ್ಯದ 16 ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಇಂತಹ ಸನ್ನಿವೇಶದಲ್ಲಿ ತಮಿಳುನಾಡಿಗೆ 24 ಸಾವಿರ ಕ್ಯೂಸೆಕ್‌ ನೀರು ಹರಿಸಲು ಸಾಧ್ಯವಿಲ್ಲ. ತಮಿಳುನಾಡಿನ ಅರ್ಜಿ ತಿರಸ್ಕರಿಸಬೇಕು’ ಎಂದು ಪ್ರಮಾಣಪತ್ರದಲ್ಲಿ ಕೋರಲಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT