ಬೆಂಗಳೂರು: ‘ಕಾವೇರಿ ನದಿಯಿಂದ ನೀರು ಹರಿಸುವಂತೆ ಆದೇಶಿಸಲು ಕೋರಿ ತಮಿಳುನಾಡು ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಗೆ ಪ್ರತಿಯಾಗಿ ಮನವಿ ಸಲ್ಲಿಸಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ’ ಎಂದು ಎಚ್.ಕೆ. ಪಾಟೀಲ ತಿಳಿಸಿದರು.
‘ಈ ಪ್ರಕರಣದ ಕುರಿತು ಚರ್ಚಿಸುವುದಕ್ಕಾಗಿ ಸಂಪುಟ ಸಭೆಗೆ ಅಡ್ವೊಕೇಟ್ ಜನರಲ್ ಅವರಿಗೂ ಆಹ್ವಾನ ನೀಡಲಾಗಿತ್ತು. ವಸ್ತುಸ್ಥಿತಿ ಆಧರಿಸಿ ಸೋಮವಾರವೇ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಲು ತೀರ್ಮಾನಿಸಲಾಯಿತು’ ಎಂದರು.
‘ಕಾವೇರಿ ನೀರಿಗೆ ಸಂಬಂಧಿಸಿದಂತೆ ಸರ್ವಪಕ್ಷ ಸಭೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಪ್ರಕಟಿಸಿದ್ದಾರೆ. ಯಾರೂ ಹೋರಾಟ, ಪ್ರತಿಭಟನೆ ನಡೆಸುವ ಅಗತ್ಯವಿಲ್ಲ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.