ಭಾನುವಾರ, 23 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಕನ್ನಡಿಗರು ಇನ್ನೈದು ವರ್ಷ ಏನೂ ಮಾಡಲು ಸಾಧ್ಯವಿಲ್ಲವೆಂಬ ಅಹಂ ಕಾಂಗ್ರೆಸ್‌ಗೆ: BJP

Published 30 ಸೆಪ್ಟೆಂಬರ್ 2023, 7:39 IST
Last Updated 30 ಸೆಪ್ಟೆಂಬರ್ 2023, 7:39 IST
ಅಕ್ಷರ ಗಾತ್ರ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ, ಸ್ಟಾಲಿನ್‌ ಗುಲಾಮರಂತೆ ಇರುವ ಕಾಂಗ್ರೆಸ್‌ ನಾಯಕರು ಅವರ (ಸ್ಟಾಲಿನ್‌) ಬಳಿ ಮಾತಾಡುವುದಕ್ಕೂ ಹೆದರಿ ಹೇಡಿಗಳಂತೆ ಇರುವುದಕ್ಕೆ ಕಾರಣವೇನು ಎಂದು ಪ್ರಶ್ನಿಸಿದೆ.

ಕಾವೇರಿ ನೀರು ಹಂಚಿಕೆ ವಿಚಾರವಾಗಿ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ, ಸ್ಟಾಲಿನ್‌ ಪರ ಪ್ರಚಾರ ಮಾಡಿದ್ದ ಸಿಎಂ ಸಿದ್ದರಾಮಯ್ಯನವರಿಗೆ ಹೈಕಮಾಂಡ್‌ ತಮ್ಮ ಬುಡ ಅಲುಗಾಡಿಸಬಹುದೆಂಬ ಭಯವಿದೆ. ಇನ್ನೂ ತಮಿಳುನಾಡಿನಲ್ಲಿ ಡಿಎಂಕೆ ಪರ ಪ್ರಚಾರ ಮಾಡಿದ್ದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ತಮ್ಮ ಸ್ವಾರ್ಥ ಮಹತ್ವಾಕಾಂಕ್ಷೆಗಾಗಿ ಹೈಕಮಾಂಡ್‌ಗೆ ನಿಯತ್ತು ತೋರಿಸಲೇಬೇಕಿದೆ ಎಂದು ಬಿಜೆಪಿ ಟೀಕಿಸಿದೆ.

ರಾಹುಲ್‌ ಗಾಂಧಿ ಸ್ನೇಹಿತ ಸ್ಟಾಲಿನ್‌ ಅವರ ಎದುರು ನಿಂತರೆ ಸಂಪುಟದಲ್ಲಿ ತಮ್ಮ ತಮ್ಮ ಕುರ್ಚಿಗಳು ಉಳಿಯುವುದಿಲ್ಲ ಎಂಬುದು ಸಚಿವರುಗಳ ಭಯವಾದರೆ, ‘ಇಂಡಿಯಾ’ ಮೈತ್ರಿಕೂಟದಲ್ಲಿ ಬಿರುಕು ಬಂದರೆ ತಮಿಳುನಾಡಿನಲ್ಲಿ ಎಂಪಿ ಸೀಟು ಸಿಗುವುದಿಲ್ಲ ಎಂಬ ಆತಂಕ ಕಾಂಗ್ರೆಸ್‌ಗೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಕರ್ನಾಟಕದ ಚುನಾವಣೆಗೆ ಕಾಂಗ್ರೆಸ್‌, ಸ್ಟಾಲಿನ್‌ ಸರ್ಕಾರದಿಂದ ದೊಡ್ಡ ಮಟ್ಟದ ಸಹಾಯಹಸ್ತ ಪಡೆದುಕೊಂಡಿದೆ. ಅಲ್ಲದೆ, ಅಧಿಕಾರ ಸಿಕ್ಕಿದೆ ನಮ್ಮನ್ನು ಯಾವ ಕನ್ನಡಿಗರು, ಕರ್ನಾಟಕ ಇನ್ನು ಐದು ವರ್ಷಗಳು ಏನು ಮಾಡಿಕೊಳ್ಳಲು ಸಾಧ್ಯವಿಲ್ಲವೆಂಬ ಅಹಂಕಾರ, ಭ್ರಮೆ ಕಾಂಗ್ರೆಸ್‌ಗೆ ಇದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT