ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದುಡ್ಡು ಹೊಡೆಯದೇ ದಸರಾ ಆಚರಿಸಿ: ಸರ್ಕಾರಕ್ಕೆ ವಿಪಕ್ಷ ನಾಯಕ ಆರ್. ಅಶೋಕ್

Published : 18 ಸೆಪ್ಟೆಂಬರ್ 2024, 7:05 IST
Last Updated : 18 ಸೆಪ್ಟೆಂಬರ್ 2024, 7:05 IST
ಫಾಲೋ ಮಾಡಿ
Comments

ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಉತ್ಸವವನ್ನ ಅದ್ಧೂರಿಯಾಗಿ ಆಚರಿಸಬೇಕು ಎಂಬ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಆದರೆ ಅದ್ಧೂರಿ ದಸರಾ, ಕಾಂಗ್ರೆಸ್ ಸರ್ಕಾರದ ಮತ್ತೊಂದು ಅದ್ಧೂರಿ ಹಗರಣಕ್ಕೆ ವೇದಿಕೆ ಆಗದಿರಲಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ.

ಈ ಕುರಿತು ಬುಧವಾರ ಎಕ್ಸ್‌ ಖಾತೆಯಲ್ಲಿ ಅವರು ಟ್ವೀಟ್ ಮಾಡಿ ಆಗ್ರಹಿಸಿದ್ದಾರೆ.

ಕಳೆದ ವರ್ಷ ಅಂತರರಾಷ್ಟ್ರೀಯ ಖ್ಯಾತಿಯ ಸರೋದ್ ವಾದಕ ಪಂಡಿತ್ ತಾರಾನಾಥ್ ಅವರ ಬಳಿಯೂ ಪರ್ಸಂಟೇಜ್ ಕಮಿಷನ್ ಕೇಳಿ ಕರ್ನಾಟಕದ ಮಾನ ಹಾರಾಜು ಹಾಕಿದ್ದ ಕಾಂಗ್ರೆಸ್ ಸರ್ಕಾರ, ಈ ವರ್ಷವಾದರೂ ನಾಡಹಬ್ಬ ದಸರಾ ಮಹೋತ್ಸವಕ್ಕೆ ಭ್ರಷ್ಟಾಚಾರದ ಸೋಂಕು ತಗುಲಿಸದೆ ಆಚರಿಸಲಿ ಎಂದು ಒತ್ತಾಯಿಸಿದ್ದಾರೆ.

ನಾಡಿನ ಸಂಸ್ಕೃತಿ, ಪರಂಪರೆಯ ಗೌರವ ಉಳಿಸುತ್ತೋ ಅಥವಾ ಈ ವರ್ಷವೂ ಮತ್ತೊಂದು ಭ್ರಷ್ಟಾಚಾರದ ಅಂಬಾರಿ ಹೊತ್ತು ಕನ್ನಡಿಗರ ಮಾನ ಕಳಿಯುತ್ತೋ ಕಾದು ನೋಡಬೇಕು. ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ. ಅಂದರೆ ಅದು ಕರ್ನಾಟಕದ ಭವ್ಯ ಸಾಂಸ್ಕೃತಿಕ ಪರಂಪರೆಯ ಪ್ರತೀಕ. ಇಡೀ ದೇಶವೇ, ಪ್ರಪಂಚವೇ ಎದುರು ನೋಡುವ ಇಂತಹ ಉತ್ಸವವನ್ನ ರಾಜ್ಯ ಸರ್ಕಾರ ಅತ್ಯಂತ ಆಸಕ್ತಿ, ಶ್ರದ್ಧೆ, ಭಕ್ತಿಗಳಿಂದ ಆಚರಿಸಬೇಕು. ಇಲ್ಲವಾದರೆ ಈ ಸರ್ಕಾರ ಆ ತಾಯಿ ಚಾಮುಂಡೇಶ್ವರಿಯ ಶಾಪಕ್ಕೆ ಗುರಿಯಾಗುವುದು ನಿಶ್ಚಿತ ಎಂದು ಎಚ್ಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT