ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹284 ಕೋಟಿಯ ಯೋಜನೆಗೆ ಕೇಂದ್ರದ ಒಪ್ಪಿಗೆ: ರಾಜ್ಯ ಅಲ್ಪಸಂಖ್ಯಾತರ ಇಲಾಖೆ

Published 12 ಮಾರ್ಚ್ 2024, 14:44 IST
Last Updated 12 ಮಾರ್ಚ್ 2024, 14:44 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿರುವ ಶಾಲಾ  ಕಾಲೇಜುಗಳಿಗೆ ಕಟ್ಟಡ, ಕೊಠಡಿಗಳ ನಿರ್ಮಾಣ ಸೇರಿದಂತೆ ‌ಮೂಲಸೌಕರ್ಯ ಕಲ್ಪಿಸುವ ₹284 ಕೋಟಿ ಮೊತ್ತದ ಯೋಜನೆಗೆc ನೀಡಿದೆ.

ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್‌ ಖಾನ್‌ ಅವರು ದೆಹಲಿಯಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಅವರನ್ನು ಇತ್ತೀಚೆಗೆ ಭೇಟಿ ಮಾಡಿ ಪ್ರಸ್ತಾವ ಸಲ್ಲಿಸಿದ್ದರು. ಅದರ ಆಧಾರದಲ್ಲಿ ಇಷ್ಟು ಮೊತ್ತದ ಯೋಜನೆಗಳಿಗೆ ಒಪ್ಪಿಗೆ ನೀಡಲಾಗಿದೆ.

‘ಈ ಯೋಜನೆಯಡಿ ತಗಲುವ ವೆಚ್ಚದಲ್ಲಿ ಕೇಂದ್ರ ಸರ್ಕಾರ ಶೇ 60 ಹಾಗೂ ರಾಜ್ಯ ಸರ್ಕಾರ ಶೇ 40 ಪಾಲು ಭರಿಸಲಿವೆ. ಕೇಂದ್ರ ಸರ್ಕಾರ ನೀಡಲಿರುವ ಮೊತ್ತದಲ್ಲಿ ರಾಜ್ಯದಲ್ಲಿ 27 ಯೋಜನೆಗಳು ಅನುಷ್ಠಾನಗೊಳ್ಳಲಿದ್ದು, ಶಾಲೆ- ಕಾಲೇಜು ಕಟ್ಟಡ, ಕೊಠಡಿ, ಗ್ರಂಥಾಲಯ ಸೇರಿ ಮೂಲಸೌಕರ್ಯ ಕಲ್ಪಿಸಲು ನೇರವಾಗಲಿದೆ’ ಎಂದು ಅಲ್ಪಸಂಖ್ಯಾತರ ಇಲಾಖೆಯ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT